September 12, 2026
;
1003975196

 

 

ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮೂಡಿಗೆರೆ ಪಟ್ಟಣದ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಮೊಸರು ಕುಡಿಕೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ಹೆಸಗಲ್‌ನ ಯೋಗೇಶ್ ಬಂಗಾರ ಅವರು ಮೊಸರು ಕುಡಿಕೆ ಸ್ಪರ್ಧೆಯಲ್ಲಿ ಪದಕ ಗೆದ್ದು ಪ್ರಥಮ ಬಹುಮಾನ ಪಡೆದರು

ಸುಮಾರು 40 ಅಡಿ ಎತ್ತರದ ಕಂಬವನ್ನು ಮಂಗಳವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮೂಲಕ ತಂದು ಪ್ರತಿಷ್ಠಾಪಿಸಲಾಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 30 ಸ್ಪರ್ಧಾಳುಗಳು ಮೊಸರು ಕುಡಿಕೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬೆಳಗ್ಗೆ 11 ಗಂಟೆಗೆ ಆರಂಭವಾದ ಕಾರ್ಯಕ್ರಮ ಸಂಜೆ 6.30ಕ್ಕೆ ಮುಕ್ತಾಯಗೊಂಡಿತು.

ಶ್ರೀ ವೇಣುಗೋಪಾಲಸ್ವಾಮಿಗೆ ಬೆಣ್ಣೆ ಅಲಂಕಾರ ಮಾಡಲಾಗಿದ್ದು, ವಿಶೇಷ ಪೂಜೆ ಹಾಗೂ ಕೈಂಕರ್ಯಗಳು ನೆರವೇರಿದವು. ಮೊಸರು ಕುಡಿಕೆ ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;