ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ವಹಿಸದೇ ರೋಗಗಳ ಬಗ್ಗೆ ಮುಕ್ತವಾಗಿ ಮಾತನಾಡುವುದು ಮತ್ತು ಜಾಗೃತೆ ವಹಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಸರ್ವೆಕ್ಷಣಾಧಿಕಾರಿ ಡಾ.ಮಧುಸೂದನ್ ಹೇಳಿದರು.
ಮೂಡಿಗೆರೆಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಬಣಕಲ್ ನಲ್ಲಿ ನಡೆದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಮಹಿಳೆಯರು ಸಂಕೋಚದಿಂದಾಗಿ ತಮಗಿರುವ ತೊಂದರೆಗಳನ್ನು ಮುಚ್ಚಿಡುತ್ತಿರುವುದು ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಉಲ್ಬಣಗೊಳ್ಳಲು ಒಂದು ಕಾರಣವಾಗಿದೆ. ಕ್ಯಾನ್ಸರ್ ಎಂದೊಡನೇ ಭಯಪಡುವ ಅಗತ್ಯವಿಲ್ಲ. ಆರಂಭಿಕ ಹಂತದಲ್ಲೇ ಪತ್ತೆಯಾದರೇ ಕ್ಯಾನ್ಸರ್‍ನ್ನು ಗುಣ ಪಡಿಸಲು ಸಾಧ್ಯವಿದೆ. ಮಹಿಳೆಯರು ಕೇವಲ ಕುಟುಂಬದ ಆರೈಕೆ ಮಾಡುವುದಷ್ಟೇ ಅಲ್ಲದೇ ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದರು.
ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಸದಾನಂದ ಬಂಗೇರ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳಾ ಸಬಲೀಕರಣ, ಆರೋಗ್ಯ ಮತ್ತು ಶಿಕ್ಷಣ, ಸ್ವಾವಲಂಬನೆಯ ಕುರಿತು ಅರಿತು ಮೂಡಿಸಲಾಗುತ್ತಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಲೇಖಕಿ ಹಾಗೂ ದ್ವಿತೀಯ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಭಾಗ್ಯ ಲಕ್ಷ್ಮಣಗೌಡ ಮಾತನಾಡಿ, ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಮಹಿಳೆಯ ಸರ್ವಾಂಗೀಣ ಅಭಿವೃದ್ದಿ ಸಾಧ್ಯವಾಗಿದೆ. ಕೀಳಿರಿಮೆಯನ್ನು ಬಿಟ್ಟು ಮಹಿಳೆ ತನ್ನ ಶಕ್ತಿ ಸಾಮಥ್ರ್ಯವನ್ನು ತಿಳಿಯಲು ಇದರಿಂದ ಸಾಧ್ಯವಾಗಿದೆ ಎಂದರು.
ಗರ್ಭಕೋಶ ಹಾಗೂ ಸ್ತನ ಕ್ಯಾನ್ಸರ್ ಕುರಿತು ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ ನಡೆಯಿತು. ಪುಷ್ಪ ಗುಚ್ಛ ಸ್ಪರ್ಧೆ ಹಾಗೂ ರಂಗೋಲಿ ಸ್ಪರ್ಧೆ, ಸಾಂಸ್ಕøತಿಕ ಕಾರ್ಯಕ್ರಮ ಸ್ಪರ್ಧೆಯಲ್ಲಿ ವಿಜೇತರಾದವರಿಗೆÀ ಬಹುಮಾನ ವಿತರಿಸಲಾಯಿತು.
ತಾಲ್ಲೂಕು ಯೋಜನಾಧಿಕಾರಿಗಳಾದ ಬೇಬಿ, ಗ್ರಾ.ಪಂ ಸದಸ್ಯರಾದ ಆತಿಕ ಭಾನು, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಸುರೇಶ್ ಶೆಟ್ಟಿ, ಪತ್ರಕರ್ತರಾದ ಪ್ರಕಾಶ್ ಬಕ್ಕಿ, ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಡಾ ಮಾಂತೇಶ್ ಪೂಜಾರಿ, ವಲಯದ ಮೇಲ್ವಿಚಾರಕರು ಸಂದೀಪ್, ಜ್ಞಾನ ವಿಕಾಸ ಸಮನ್ವಯಧಿಕಾರಿಗಳು, ಸೇವಾಪ್ರತಿನಿಧಿಗಳು, ಸೇವಾದಾರರು, ತಾಲೂಕಿನ ಎಲ್ಲ ಜ್ಞಾನವಿಕಾಸ ಕೇಂದ್ರದ ಸದಸ್ಯರು ಇದ್ದರು.


