September 17, 2026
;
ananth-nag

 

 

ಹಿರಿಯ ನಟ ಅನಂತ್‌ ನಾಗ್‌ ಅವರನ್ನು ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ’ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಭಾರತೀಯ ಚಿತ್ರರಂಗದಲ್ಲಿ ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಸಲ್ಲಿಸಿರುವ ಅನುಪಮ ಕೊಡುಗೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 22 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಈ ಕುರಿತು ಭಾರತೀಯ ವಾರ್ತಾಶಾಖೆ ಪಿಐಬಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಹಾಗೂ ಹಲವಾರು ತಲೆಮಾರುಗಳಿಗೆ ಸ್ಫೂರ್ತಿಯಾಗಿರುವ ಅವರ ಅದ್ಭುತ ಸಿನಿಮಾ ಪಯಣಕ್ಕಾಗಿ ನಟ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2024’ ಅನ್ನು ನೀಡಲಾಗುತ್ತಿದೆ.

ಗುಜರಾತ್‌ನ ಕೆವಾಡಿಯಾದಲ್ಲಿ 2026ರ ಸೆಪ್ಟೆಂಬರ್ 22 ರಂದು ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ: ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅನಂತ್ ನಾಗ್ ಅವರನ್ನು ಅಭಿನಂದಿಸಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ದಿಗ್ಗಜ ನಟ ಅನಂತ್ ನಾಗ್ ಅವರಿಗೆ ಅಭಿನಂದನೆಗಳು. ದಶಕಗಳ ಕಾಲ ಅವರ ಸಹಜ ಅಭಿನಯ, ಅದ್ಭುತ ಬಹುಮುಖಿ ಪ್ರತಿಭೆ ಮತ್ತು ಚಾತುರ್ಯವು ಭಾರತೀಯ ಚಿತ್ರರಂಗದ ಮೇಲೆ, ಅದರಲ್ಲೂ ವಿಶೇಷವಾಗಿ ಕನ್ನಡ ಚಿತ್ರರಂಗದ ಮೇಲೆ ಅಳಿಸಲಾಗದ ಛಾಪು ಮೂಡಿಸಿದೆ. ಅವರು ನಿರ್ವಹಿಸಿದ ಪ್ರತಿಯೊಂದು ಪಾತ್ರಕ್ಕೂ ನೈಜತೆಯನ್ನು ತಂದಿದ್ದಾರೆ. ನಿಜಕ್ಕೂ ಅತ್ಯುನ್ನತ ಕಲಾವಿದರೊಬ್ಬರಿಗೆ ಸಂದ ಅತ್ಯಂತ ಸೂಕ್ತವಾದ ಗೌರವವಿದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ:

1948ರ ಸೆ. 4ರಂದು ಅನಂತ್ ನಾಗ್ ಅವರು ಉತ್ತರ ಕನ್ನಡದ ಶಿರಳ್ಳಿ ಎಂಬಲ್ಲಿ ಜನಿಸಿದರು. 1973ರ ‘ಸಂಕಲ್ಪ’ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಪದಾರ್ಪಣೆ ಮಾಡಿದ ಅನಂತ್ ನಾಗ್, ಆನಂತರದಲ್ಲಿ ಶ್ಯಾಮ್ ಬೆನಗಲ್ ಅವರ ಅಂಕುರ್, ಬಯಲುದಾರಿ, ನಾ ನಿನ್ನ ಬಿಡಲಾರೆ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದರು. ತಮ್ಮ ಆರಂಭಿಕ ಚಿತ್ರ ಜೀವನದಲ್ಲಿ ದೊಡ್ಡ ಯಶಸ್ಸು ಗಳಿಸಿದರು. ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅನಂತ್‌ ನಾಗ್‌, ಯಾವುದೇ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ಅಭಿನಯಿಸಬಲ್ಲ ಕಲಾವಿದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;