September 19, 2026
;
prema teacher1

 

 

ಇತ್ತೀಚೆಗೆ ಎನ್.ಆರ್.ಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮೂಡಿಗೆರೆ ತಾಲ್ಲೂಕು ಬಗ್ಗಸಗೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಬಿ.ಟಿ. ಪ್ರೇಮಾ ಅವರಿಗೆ ಶಾಲಾ ಅಭಿವೃದ್ಧಿ ಮಂಡಳಿ ಹಾಗೂ ಗ್ರಾಮಸ್ಥರು, ಪೋಷಕರು, ಹಳೇವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದರು.

ಮೂಡಿಗೆರೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿಯೂ ಪ್ರೇಮಾ ಅವರನ್ನು ಗೌರವಿಸಿ ಅಭಿನಂದಿಸಲಾಯಿತು.

ಪ್ರೇಮಾ ಅವರು ಮೂಲತಃ ಮೂಡಿಗೆರೆ ತಾಲ್ಲೂಕು ಬೈದುವಳ್ಳಿ ಗ್ರಾಮದವರು. ಅವರ ಪತಿ ಪರಮೇಶ್ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.  2002ರಲ್ಲಿ ಶಿಕ್ಷಕ ವೃತ್ತಿಗೆ ಸೇರಿದ ಪ್ರೇಮ ಅವರು ಕನಕಪುರ ತಾಲ್ಲೂಕಿನಲ್ಲಿ 4 ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ಮೂಡಿಗೆರೆ ತಾಲ್ಲೂಕು ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 13 ವರ್ಷಗಳ ಕಾಲ ಸೇವೆಸಲ್ಲಿಸಿದ್ದರು. ಕಳೆದ 7 ವರ್ಷಗಳಿಂದ ಬಗ್ಗಸಗೋಡು ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ತಾವು ಸೇವೆ ಸಲ್ಲಿಸಿದ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಮಾರ್ಗದರ್ಶನ ನೈತಿಕ ಮೌಲ್ಯಗಳನ್ನು ಪಸರಿಸುತ್ತಾ ಅಚ್ಚುಮೆಚ್ಚಿನ ಶಿಕ್ಷಕಿಯಾಗಿ ಗುರುತಿಸಿಕೊಂಡಿದ್ದಾರೆ. ಇವರ ಶೈಕ್ಷಣಿಕ ಸೇವೆ ಮತ್ತು ಕಾಳಜಿಯನ್ನು ಗುರುತಿಸಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಪ್ರಶಸ್ತಿ ವಿಜೇತ ಪ್ರೇಮಾ ಅವರಿಗೆ ಅವರ ಸಹೋದ್ಯೋಗಿಗಳು, ಸಂಬಂಧಿಕರು, ಪೋಷಕರು, ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

 

 

Leave a Reply

Your email address will not be published. Required fields are marked *