September 22, 2026
;
shivakumar

 

 

ಶನಿವಾರ ಮತ್ತು ಭಾನುವಾರ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಮತ್ತು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿಯ ಶಿಫಾರಸುಗಳ ಕುರಿತು ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಭೂಮಿ ಮಂಜೂರಾತಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ಸರ್ಕಾರ ಪ್ರಯತ್ನಿಸಲಿದೆ. ರೈತರ ಹಿತದೃಷ್ಟಿಯಿಂದ ಅಗತ್ಯವಿದ್ದರೆ ಕಾನೂನುಗಳಿಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದರು. ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದ ವಿಚಾರದಲ್ಲಿ ಸರ್ವಪಕ್ಷಗಳ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿಗೆ ಕರೆದೊಯ್ಯುವುದಾಗಿಯೂ ಅವರು ಭರವಸೆ ನೀಡಿದರು.

ಎರಡೂ ಕಡೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್, ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಪರಿಸರ ಸಂರಕ್ಷಣೆ ಮತ್ತು ಅಭಿವೃದ್ಧಿಯ ನಡುವೆ ಸಮತೋಲನ ಸಾಧಿಸುವ ಉದ್ದೇಶದಿಂದ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ಸೇರಿದಂತೆ ಆರು ರಾಜ್ಯಗಳಾದ್ಯಂತ ಸುಮಾರು 60,000 ಚದರ ಕಿ.ಮೀ. ವ್ಯಾಪ್ತಿಯ ಪಶ್ಚಿಮ ಘಟ್ಟಗಳ ಶೇ.37ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವಂತೆ ಕಸ್ತೂರಿರಂಗನ್ ಸಮಿತಿ ಶಿಫಾರಸು ಮಾಡಿತ್ತು.

ಡಿ ಕೆ ಶಿವಕುಮಾರ್ ಅವರು ಈಗಾಗಲೇ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಿಗೂ ಭೇಟಿ ನೀಡಿ ಅಲ್ಲಿನ ರೈತರ ಅಹವಾಲುಗಳನ್ನು ಆಲಿಸಿದರು.

ಈ ವೇಳೆ, ಒತ್ತುವರಿ ಜಮೀನು ಲೀಜ್ ಗೆ ನೀಡುವ ವಿಚಾರವಾಗಿ ಮಾನತಾಡಿ ; ಹೊಸದಾಗಿ  ಒತ್ತುವರಿ ಮಾಡಿದರೆ ಅವಕಾಶವಿಲ್ಲ. ಈಗ ನಿಮಗೆ ಇರುವ ನಿಮ್ಮ ಜಮೀನನ್ನು ಭದ್ರವಾಗಿ ಇಟ್ಟುಕೊಳ್ಳಿ. ಯಾರಿಗೂ ತೊಂದರೆ, ನೋಟಿಸ್ ಕೊಡಬೇಡಿ ಎಂದು ಅರಣ್ಯ ಇಲಾಖೆಗೆ ಹೇಳಿದ್ದೇನೆ ಎಂದರು.

ಲೀಜ್ ವಿಚಾರದಲ್ಲಿ ಎಲ್ಲರಿಗೂ 25 ವರ್ಷ ಮಾಡಬೇಕು ಅಂತ ತೀರ್ಮಾನಿಸಿ ಕೇಂದ್ರಕ್ಕೆ ಕಳಿಸಲು ಚಿಂತಿಸಿದ್ದೇವೆ. ಎಕೋ ಸೆನ್ಸಿಟೀವ್ ಜೋನ್ ಕೈಬಿಡುವಂತೆ ರೈತರು ಸೂಚಿಸಿದ್ದಾರೆ. ಕೇಂದ್ರಕ್ಕೆ ಯಾವ ರೀತಿ ವರದಿ ಕೊಡಬಹುದು ಎಂದು ಅಧಿಕಾರಿಗಳ ಜೊತೆ ಚರ್ಚಿಸಿ ಕೊಡುತ್ತೇವೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆಯಾ ಜಿಲ್ಲೆಗಳ ಸಂಸದರು, ಶಾಸಕರು, ಸಚಿವರು, ಉಸ್ತುವಾರಿ ಸಚಿವರು, ವಿವಿಧ ಪಕ್ಷಗಳ ಸಂಘಟನೆಗಳ ಮುಖಂಡರು  ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *