September 25, 2026
;
maruthanike

ಶಶಿಕುಮಾರ್, ನಿಶಾ ಜೇಮ್ಸ್

 

 

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ನಿರ್ದೇಶನದ ಮೇರೆಗೆ ಪ್ರಕರಣದ ಮರುತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು   ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಐಜಿಪಿ ಎನ್. ಶಶಿಕುಮಾರ್  ಅವರ ನೇತೃತ್ವದಲ್ಲಿ ಈ ವಿಶೇಷ ತನಿಖಾ ದಳ ಕಾರ್ಯನಿರ್ವಹಿಸಲಿದ್ದು, ತಂಡದಲ್ಲಿ ಅನುಭವಿ ಉನ್ನತ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್‌ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್, ಎಎಸ್‌ಪಿ ವೆಂಕಟೇಶ್ ಪ್ರಸನ್ನ ಅವರಿದ್ದಾರೆ.

ಅನ್ಯಾಯಕ್ಕೊಳಗಾದ ಮಗಳಿಗೆ ನ್ಯಾಯ ದೊರಕಿಸಿಕೊಡಲು ಸೌಜನ್ಯಾ ಅವರ ತಾಯಿ ಕುಸುಮಾವತಿ ಗೌಡ ಅವರು ಸುದೀರ್ಘ ಕಾನೂನು ಹೋರಾಟ ನಡೆಸಿದ್ದರು. ಈ ಸಂಬಂಧ ಅವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಹಿಂದಿನ ತನಿಖಾ ವೈಫಲ್ಯಗಳನ್ನು ಗಂಭೀರವಾಗಿ ಪರಿಗಣಿಸಿತ್ತು.

ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಹೊಸ ಎಸ್‌ಐಟಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದ ನ್ಯಾಯಪೀಠ, ಇಡೀ ತನಿಖಾ ಪ್ರಕ್ರಿಯೆಯನ್ನು ಕೇವಲ ಮೂರು ತಿಂಗಳ ಕಾಲಮಿತಿಯೊಳಗೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಸಮಗ್ರ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿತ್ತು. ಸುಪ್ರೀಂ ಕೋರ್ಟ್‌ನ ಈ ಕಟ್ಟುನಿಟ್ಟಿನ ಆದೇಶದ ಫಲವಾಗಿ ಇದೀಗ ರಾಜ್ಯ ಸರ್ಕಾರ ಎಸ್‌ಐಟಿ ಅಖಾಡಕ್ಕಿಳಿಸಿದ್ದು, ನೈಜ ಅಪರಾಧಿಗಳಿಗೆ ಕಾನೂನಿನ ಶಿಕ್ಷೆಯಾಗಲಿದೆಯೇ ಎಂಬ ನಿರೀಕ್ಷೆ ಸಾರ್ವಜನಿಕ ವಲಯದಲ್ಲಿ ಮತ್ತೊಮ್ಮೆ ಗರಿಗೆದರಿದೆ.

 

 

Leave a Reply

Your email address will not be published. Required fields are marked *