October 8, 2026
;
WhatsApp Image 2026-09-25 at 1.41.45 AM

 

 

ರಾಜ್ಯದಲ್ಲಿ ತೀವ್ರ ಬರಗಾಲ ಬಂದಿರುವುದರಿಂದ   ನಮ್ಮ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನಲ್ಲಿ ಪ್ರತಿ ವರ್ಷದಂತೆ ಮಳೆಯು ಕಡಿಮೆ ಆಗಿದ್ದು ಮೂಡಿಗೆರೆ ತಾಲ್ಲೂಕು ಬರಗಾಲವಾಗಿದೆ. ಮೂಡಿಗೆರೆಯ ಗ್ರಾಮ ವ್ಯಾಪ್ತಿಗಳಲ್ಲಿ ಕೆರೆ, ಬಾವಿಗಳ ಬಗ್ಗೆ ಪರಿಶೀಲಿಸುವ ಜೊತೆಗೆ ಅದನ್ನು ಸ್ವಚ್ಛಗೊಳಿಸಿ ಮತ್ತು ನೀರನ್ನು ಸಂಗ್ರಹಿಸಬೇಕು ಮತ್ತು ಮೂಡಿಗೆರೆಯ ಹೇಮಾವತಿ ಹಳ್ಳ ಹಾಗೂ ಸುತ್ತ ಮುತ್ತ ಕೆರೆ, ಬಾವಿಗಳಿಗೆ,ಮೋಟರ್ ಅನ್ನು ಅಳವಡಿಸಿ ತೋಟಗಳಿಗೆ ನೀರನ್ನು ಬಳಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು  ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕ ರ ವೇ ತಾಲ್ಲೂಕು ಅಧ್ಯಕ್ಷ ವಿನೋದ್ ಬಿದರಹಳ್ಳಿ ಅವರ ನೇತೃತ್ವದಲ್ಲಿ ತಹಸೀಲ್ದಾರ್ ಕಛೇರಿಗೆ ಈ ಬಗ್ಗೆ ಮನವಿ ಪತ್ರ ನೀಡಿ ಜಲಮೂಲಗಳ ರಕ್ಷಣೆಗೆ ಅಗತ್ಯ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

 

 

Leave a Reply

Your email address will not be published. Required fields are marked *