October 26, 2026
;
suddi--7

 

 

ಮೂಡಿಗೆರೆ ತಾಲ್ಲೂಕು ಬಣಕಲ್ ವಿಲೇಜ್‍ನಿಂದ ಕೋಗಿಲೆವರೆಗೆ  4 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಬಣಕಲ್ ವಿಲೇಜ್ ಕಿರಿಯ ಪ್ರಾಥಮಿಕ ಶಾಲೆ ಸಮೀಪ ನಡೆದ ಕಾರ್ಯಕ್ರಮದಲ್ಲಿ ಶಾಸಕಿ ನಯನಾ ಮೋಟಮ್ಮ ಕಾಮಗಾರಿಗೆ ಚಾಲನೆ ನೀಡಿದರು. ಹಲವು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆಯಿಂದ ಗ್ರಾಮಸ್ಥರು, ಕಾಫಿ ಬೆಳೆಗಾರರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದರು. ಇದೀಗ ರಸ್ತೆ ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿರುವುದು ಸ್ಥಳೀಯರಲ್ಲಿ ಸಂತಸ ಮೂಡಿಸಿದೆ.

ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಬಣಕಲ್ ವಿಲೇಜ್?ಕೋಗಿಲೆ ರಸ್ತೆ ಅಭಿವೃದ್ಧಿಯಿಂದ ಗ್ರಾಮಸ್ಥರು ಹಾಗೂ ಕಾಫಿ ಬೆಳೆಗಾರರಿಗೆ ಅನುಕೂಲವಾಗಲಿದೆ. ಈ ರಸ್ತೆ ದೇವರಮನೆ ಸಂಪರ್ಕಕ್ಕೂ ಪ್ರಮುಖವಾಗಿದ್ದು, ಸಂಚಾರ ಮತ್ತಷ್ಟು ಸುಗಮವಾಗಲಿದೆ. ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ನಡೆಯುವಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.

ಕಾಂಗ್ರೆಸ್ ಮುಖಂಡ ಬಿ.ಸಿ. ಪ್ರವೀಣ್ ಮಾತನಾಡಿ, ಹಲವು ವರ್ಷಗಳಿಂದ ಹದಗೆಟ್ಟಿದ್ದ ಈ ರಸ್ತೆಯ ಅಭಿವೃದ್ಧಿಗೆ ಸ್ಥಳೀಯರು ಮನವಿ ಮಾಡುತ್ತಿದ್ದರು. ಇದೀಗ  4 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭಿಸಿರುವುದು ಸಂತಸದ ವಿಚಾರ. ರಸ್ತೆ ಉತ್ತಮ ಗುಣಮಟ್ಟದಲ್ಲಿ ನಿರ್ಮಾಣಗೊಂಡು ದೀರ್ಘಕಾಲ ಬಾಳಿಕೆ ಬರುವಂತಾಗಬೇಕು ಎಂದರು.

ಕಾಫಿ ಬೆಳೆಗಾರ ದೀಪು ಮಾತನಾಡಿ, ಮಳೆಗಾಲದಲ್ಲಿ ಹದಗೆಟ್ಟ ರಸ್ತೆಯಿಂದ ಸಂಚಾರಕ್ಕೆ ಹೆಚ್ಚಿನ ತೊಂದರೆಯಾಗುತ್ತಿತ್ತು. ಇದೀಗ ಕಾಮಗಾರಿ ಆರಂಭವಾಗಿರುವುದು ಸ್ವಾಗತಾರ್ಹ. ಗುತ್ತಿಗೆದಾರರು ಗುಣಮಟ್ಟಕ್ಕೆ ಆದ್ಯತೆ ನೀಡಿ ಕಾಮಗಾರಿ ಕೈಗೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದಿವ್ಯ, ಶ್ರೀನಿವಾಸ್ ಗೌಡ, ಹೋಬಳಿ ಅಧ್ಯಕ್ಷ ಸುಬ್ರಮಣ್ಯ, ಕಾಂಗ್ರೆಸ್ ಮುಖಂಡರಾದ ಗುತ್ತಿ ಅರುಣ್, ವಿನಯ್, ವಿಕ್ರಂಗೌಡ, ದೇವರಾಜ್, ಸುಬ್ರಾಯ ಗೌಡ, ಮಂಜಯ್ಯ ಸೇರಿದಂತೆ ಕೋಗಿಲೆ ಹಾಗೂ ಬಣಕಲ್ ವಿಲೇಜ್‍ನ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ಬಳಿಕ ಶಾಸಕಿ ನಯನಾ ಮೋಟಮ್ಮ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

 

 

Leave a Reply

Your email address will not be published. Required fields are marked *