October 7, 2026
;
makkalu

 

 

ಕೆರೆಯಲ್ಲಿ   ಈಜಲು   ಹೋಗಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಮರ್ಲೆ ಗ್ರಾಮದಲ್ಲಿ ನಡೆದಿದೆ.

ಮೃತ ಮಕ್ಕಳೆಲ್ಲ ಒಂದೇ ಊರಿನವರಾಗಿದ್ದು, ಎಲ್ಲಾ12 ವರ್ಷದವರಾಗಿದ್ದಾರೆ. ಇವರೆಲ್ಲ ಬೇರೆ ಬೇರೆ ಶಾಲೆಗಳಲ್ಲಿ 6ನೇ ತರಗತಿ ಓದುತ್ತಿದ್ದರು. ಶಾಲೆಗಳಿಗೆ ದಸರಾ ರಜೆ ಇರುವುದರಿಂದ ಮಕ್ಕಳು ಕೆರೆಯಲ್ಲಿ ಈಜಲು ತೆರಳಿದ್ದರು ಎನ್ನಲಾಗಿದೆ.

ಕೆರೆ ಬಳಿ  ಬಟ್ಟೆ ಹಾಗೂ ಪಾತ್ರೆ ತೊಳೆಯಲು ನಿರ್ಮಿಸಿರುವ ಕಟ್ಟೆಗಳ ಬಳಿ ಮಕ್ಕಳು ಈಜುವಾಗ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಮಕ್ಕಳ ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ.

ಸಾಲಾಗಿ ಮಲಗಿಸಿರುವ ಪುಟ್ಟ-ಪುಟ್ಟ ಮಕ್ಕಳು ಮೃತದೇಹವನ್ನ ಕಂಡು ಇಡೀ ಗ್ರಾಮದ ಜನರೇ ಕಣ್ಣೀರಿಟ್ಟಿದ್ದಾರೆ. ಕಳೆದ ವರ್ಷ ಕೆರೆಯಲ್ಲಿ ಹೂಳು ತೆಗೆದಿದ್ದರಿಂದ ಕೆರೆಯ ಆಳದ ಪ್ರಮಾಣವೂ ಹೆಚ್ಚಿತ್ತು. ಆಳದ ಅರಿವಿಲ್ಲದ ಮಕ್ಕಳು ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

Leave a Reply

Your email address will not be published. Required fields are marked *