ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಮಗಳೂರು ಶಿಶು ಅಭಿವೃದ್ಧಿ ಯೋಜನೆ, ಮೂಡಿಗೆರೆ ಮತ್ತು ಚಿಕ್ಕಮಗಳೂರು ಇವರ ವತಿಯಿಂದ 2026-27ನೇ ಸಾಲಿನಲ್ಲಿ ಮೂಡಿಗೆರೆ, ಕಳಸ ಚಿಕ್ಕಮಗಳೂರು ತಾಲೂಕಿನಿಂದ ಆಯ್ಕೆಯಾದ, 2 ಅಂಗನವಾಡಿ ಕಾರ್ಯಕರ್ತರು ಮತ್ತು 48 ಜನ ಅಂಗನವಾಡಿ ಸಹಾಯಕಿ ಯರಿಗೆ ನೇಮಕಾತಿ ಆದೇಶ ಪ್ರತಿಯನ್ನು ಮೂಡಿಗೆರೆ ಕ್ಷೇತ್ರದ ಶಾಸಕರಾದ ನಯನ ಮೋಟಮ್ಮನವರು ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಕೃಷ್ಣಪ್ಪ, ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.



