ಗುರುವಾರ ಮಧ್ಯಾಹ್ನ ಮೂಡಿಗೆರೆ ತಾಲ್ಲೂಕಿನ ಹಲವೆಡೆ ಉತ್ತಮ ಮಳೆಯಾಗಿದೆ. ಮಳೆಯಿಲ್ಲದೇ ಕಂಗಾಲಾಗಿದ್ದ ರೈತಾಪಿ ವರ್ಗದವರ ಮೊಗದಲ್ಲಿ ಹರ್ಷ ಮೂಡಿಸಿದೆ. ದಿಡೀರ್ ಎಂದು ಸುರಿದ ಭಾರಿ ಗಾಳಿ ಮಳೆಗೆ ಮೂಡಿಗೆರೆ ತಾಲ್ಲೂಕು ಹಂತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾಣಿಗೆ ಸರ್ಕಾರಿ ಶಾಲೆಯ ಕಟ್ಟಡದ ಮೇಲ್ಛಾವಣಿಯ 100ಕ್ಕೂ ಹೆಚ್ಚು ಹೆಂಚುಗಳು ಬಿದ್ದು ಹಾನಿಗೊಳಗಾಗಿವೆ.
ಗುರುವಾರ ಮಧ್ಯಾಹ್ನ ಬಿದ್ದ ಮಳೆಯು ಒಂದು ಕ್ಷಣ ರೌದ್ರ ನರ್ತನವನ್ನೆ ಮಾಡಿತು ಬಾರಿ ಪ್ರಮಾಣದ ಗಾಳಿ ಮಳೆಯ ರಭಸಕ್ಕೆ ಜಾಣಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲೆಯ ಮೇಲ್ಛಾವಣಿಯ ಹೆಂಚುಗಳು ಹಾರಿಹೋಗಿವೆ, ಶಾಲಾ ಕಟ್ಟಡಕ್ಕೆ ಹಾನಿಯಾಗಿದೆ. ಘಟನೆಯ ಸಂದರ್ಭದಲ್ಲಿ ಶಾಲೆಯಲ್ಲಿ ವಿದ್ಯಾರ್ಥಿಗಳು ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಹಲವು ವರ್ಷಗಳಿಂದ ಹಳೆಯದಾಗಿರುವ ಈ ಶಾಲಾ ಕಟ್ಟಡದ ಮೇಲ್ಛಾವಣಿ ಮಳೆಗಾಲದಲ್ಲಿ ಅಪಾಯಕಾರಿಯಾಗಿದ್ದು, ಇದೀಗ ಭಾರಿ ಗಾಳಿ ಮಳೆಯಿಂದ ಹೆಂಚುಗಳು ಉದುರಿ ಬಿದ್ದಿರುವುದು ಆತಂಕಕ್ಕೆ ಕಾರಣವಾಗಿದೆ. ಶಾಲಾ ಕಟ್ಟಡವನ್ನು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪರಿಶೀಲಿಸಿ, ದುರಸ್ತಿ ಕಾರ್ಯ ಕೈಗೊಂಡು ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಜಾಣಿಗೆ ಸರ್ಕಾರಿ ಶಾಲೆಯ ಕಟ್ಟಡ ಹಲವು ವರ್ಷಗಳಿಂದ ಹಳೆಯದಾಗಿದ್ದು ಇಂದು ಸುರಿದ ಭಾರಿ ಮಳೆಗೆ ಸುಮಾರು 150ಕ್ಕೂ ಹೆಚ್ಚು ಹೆಂಚುಗಳು ಹಾನಿಯಾಗಿದೆ.ಅದೃಷ್ಟ ವಷತ್ ಯಾವುದೇ ಅವಘಡ ಸಂಭವಿಸಿಲ್ಲ.ಸಂಬಂಧಪಟ್ಟ ಅಧಿಕಾರಿಗಳು ಕೂಡಲೆ ಶಾಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಾಲಾ ಕಟ್ಟಡವನ್ನು ತುರ್ತು ದುರಸ್ತಿ ಪಡಿಸಿ ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು.
- ಮೋಹನ್ ಜಾಣಿಗೆ


