October 12, 2026
;
forest

 

 

ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕು, ಮೂಡಿಗೆರೆ ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಊರುಬಗ್ಗೆ ಡಿಆರ್‌ಎಫ್-4 ಮೀಸಲು ಅರಣ್ಯ ಪ್ರದೇಶದಲ್ಲಿ ರಸ್ತೆ ನಿರ್ಮಾಣ, ಮರಗಳ ಕಡಿತ ಹಾಗೂ ಅರಣ್ಯ ಭೂಮಿ ಒತ್ತುವರಿ ಆರೋಪಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲಾಗಿತ್ತು.

ರವಿ ಕುಮಾರ್

ಈ ದೂರಿನ ಹಿನ್ನೆಲೆಯಲ್ಲಿ ಇಲಾಖಾ ಮಟ್ಟದಲ್ಲಿ ಕ್ರಮ ಕೈಗೊಂಡು ಡಿಆರ್‌ಎಫ್ ರವಿ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಈ ವಿಚಾರದಲ್ಲಿ  ಹಸಿರು ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರು ರತನ್ ಊರುಬಗೆ ಹಾಗೂ ಸಾಮಾಜಿಕ ಕಾರ್ಯಕರ್ತ ಅರೆನೂರು ಸುಪ್ರೀತ್  ಅವರು ನಿರಂತರವಾಗಿ ಹೋರಾಟ ನಡೆಸಿ, ಅರಣ್ಯ ಸಂರಕ್ಷಣೆ ಹಾಗೂ ಅಕ್ರಮ ಚಟುವಟಿಕೆಗಳ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿದ್ದಾರೆ.

ಸತತ ಮನವಿ, ದೂರು ಹಾಗೂ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಇಲಾಖೆಯಿಂದ ಅಮಾನತು ಕ್ರಮ ಕೈಗೊಳ್ಳಲಾಗಿದೆ.

 

 

Leave a Reply

Your email address will not be published. Required fields are marked *