October 13, 2026
;
suddi-4 (4)

 

 

ವಾವಾಚಾರ, ದೆವ್ವ ಬಿಡಿಸುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಯಶಸ್ವಿಯದ್ದಾರೆ.

ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದ್ದರು. ಮಹಿಳೆಯ ದೂರಿನ ಮೇರೆಗೆ ಆರೋಪಿ ಸತೀಶ್ ಪಾತ್ರಿ ವಿರುದ್ಧ ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸತೀಶ್ ಪಾತ್ರಿ ನಾಪತ್ತೆಯಾಗಿದ್ದನು. ಇದೀಗ ಪ್ರಕರಣ ದಾಖಲಾಗಿ ತಿಂಗಳುಗಳ ನಂತರ ಕೊನೆಗೂ ಆರೋಪಿ ಸತೀಶ್ ಪಾತ್ರಿಯನ್ನು ಕೊಪ್ಪ ಠಾಣೆ ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ  ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿ ಸತತವಾಗಿ ಮೊಬೈಲ್ ನಂಬರ್ ಗಳನ್ನು ಬದಲಾಯಿಸುತ್ತಾ. ಪೊಲೀಸರ ಕಣ್ತಪ್ಪಿಸಿ ತಿರುಗುತ್ತಿದ್ದ. ಇದೀಗ ತಾಂತ್ರಿಕ ವಿಶ್ಲೇಷಣೆಯ ನಂತರ ಸತೀಶ್ ಪಾತ್ರಿ ಬೆಂಗಳೂರಿನ ಪಿ ಜಿ ಯೊಂದರಲ್ಲಿ ಇದ್ದ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ದೆವ್ವ ಬಿಡಿಸುವುದಾಗಿ ಹೇಳಿ ಹಾಸನ ಮೂಲದ ಮಹಿಳೆಯ ಮೇಲೆ ಆರೋಪಿ ಸತೀಶ್ ಪಾತ್ರಿ ನಿರಂತರವಾಗಿ ಅತ್ಯಾಚಾರವೆಸಿದ್ದ ಎಂದು ಆರೋಪಿಸಲಾಗಿದೆ. ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಹಾಗೂ ತೀರ್ಥಹಳ್ಳಿಯ ಕುದುರೆಗುಂಡಿಗೆ ಕರೆದೊಯ್ದು ಈ ಕೃತ್ಯ ಎಸಗಿರುವುದಾಗಿ ಮಹಿಳೆ ಆರೋಪಿಸಿದ್ದರು. ಈ ಬಗ್ಗೆ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. ತನ್ನ ಮೇಲೆ ಎಫ್‍ಐಆರ್ ಆಗುತ್ತಿದ್ದಂತೆ ಪರಾರಿಯಾಗಿದ್ದ ಸತೀಶ್ ಪಾತ್ರಿ ಇದೀಗ   ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಸಂತ್ರತೆಯ ದೂರಿನ ಮೇರೆಗೆ ಎನ್.ಆರ್. ಪುರ ಠಾಣೆಯಲ್ಲಿ ಮೌಢ್ಯ ಪ್ರತಿಬಂಧಕ (ಬ್ಲಾಕ್ ಮ್ಯಾಜಿಕ್) ಕಾಯ್ದೆಯಡಿ ಮತ್ತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಈಗ ಪೊಲೀಸರು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.

ಈ ನಡುವೆ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಜೊತೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಎನ್‌.ಆರ್‌ ಪುರ ಠಾಣೆಯ ಕಾನ್ಸ್‌ಟೇಬಲ್‌ ಕಾಂತೇಶ್ ಎಂಬಾತನನ್ನು ಚಿಕ್ಕಮಗಳೂರು ಎಸ್‌ಪಿ ಜಿತೇಂದ್ರ ಕುಮಾರ್  ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

 

 

Leave a Reply

Your email address will not be published. Required fields are marked *