October 14, 2026
;
IMG-20261013-WA0217

 

 

ಮೂಡಿಗೆರೆ ತಾಲೂಕು ವ್ಯವಸಾಯೋತ್ಪಾನ್ನ ಮಾರಾಟ ಸಹಕಾರ ಸಂಘ ನಿಯಮಿತ ಅಧಿಕಾರೆತರ ಸದಸ್ಯರಾಗಿ ಕಾಂಗ್ರೇಸ್ ಯುವ ಮುಖಂಡ ಸುಬ್ರಮಣ್ಯ ತ್ರಿಪುರ ಅವರು ನೇಮಗೊಂಡಿದ್ದಾರೆ

ಕರ್ನಾಟಕ ಅದಿನಿಯಮ 1959ರ  ಪ್ರಕರಣ 28 ಎ ಉಪಪ್ರಕರಣ (4ಬಿ) (1)ರ ಮೆರೆಗೆ ಪ್ರದತ್ತವಾದ ಅಧಿಕಾರ ಚಲಾಯಿಸಿ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಸರ್ಕಾರ ಆದೇಶ ಹೊರಡಿಸಿದೆ

ಸುಬ್ರಮಣ್ಯ ಅವರು ಕಾಂಗ್ರೆಸ್ ಪಕ್ಷದಲ್ಲಿ ಅನೇಕ ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ತ್ರಿಪುರ ಗ್ರಾಮ ಪಂಚಾಯಿತಿ ಸದಸ್ಯರಾಗಿ. ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬಣಕಲ್ ಹೋಬಳಿ ಕಾಂಗ್ರೇಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ವ್ಯವಸಾಯೋತ್ಪನ್ನ ಸಹಕಾರ ಸಂಘದ ನಾಮನಿರ್ದೇಶನ ಸದಸ್ಯನ್ನಾಗಿ ಆಯ್ಕೆ ಮಾಡಿರುವುದು ಖುಷಿ ತಂದಿದ್ದು, ಈ ಜವಾಬ್ದಾರಿಯನ್ನು ಹಿರಿಯರ ಮಾರ್ಗದರ್ಶನದಲ್ಲಿ ಅಚ್ಚುಕಟ್ಟಾಗಿ ನಿಭಾಯಿಸುವುದಾಗಿ ತಿಳಿಸಿದರು. ಜನಪ್ರಿಯ ಶಾಸಕಿ ನಯನಾ ಮೋಟಮ್ಮ, ಮಾಜಿ ಸಚಿವೆ ಮೋಟಮ್ಮ ಕಾಂಗ್ರೆಸ್ ಪಕ್ಷದ ಎಲ್ಲಾ ಹಿರಿಯ ಮುಖಂಡರು ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

 

 

Leave a Reply

Your email address will not be published. Required fields are marked *