October 17, 2026
;
praja 2

 

 

ನಾಗರಿಕರಿಂದ ಕುಂದು ಕೊರತೆಗಳ ಮನವಿ ಸ್ವೀಕರಿಸಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಅಕ್ಟೋಬರ್ 17ರ ಶನಿವಾರದಂದು ಪ್ರಜಾ ಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕು ಖಾಂಡ್ಯ  ಹೋಬಳಿಯ ಸಂಗಮೇಶ್ವರ ಪೇಟೆ ಗ್ರಾಮದ ಶ್ರೀ ವಿದ್ಯಾ ಗಣಪತಿ ಸಮುದಾಯ ಭವನದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರ ಅಧ್ಯಕ್ಷತೆಯಲ್ಲಿ,

ಕಡೂರು ತಾಲ್ಲೂಕಿನ  ಬಳ್ಳೇಕೆರೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರ ಅಧ್ಯಕ್ಷತೆಯಲ್ಲಿ,

ಅಜ್ಜಂಪುರ ತಾಲ್ಲೂಕಿನ ಶಿವನಿ ಹೋಬಳಿಯ ಚೀರನಹಳ್ಳಿ ಗ್ರಾಮ ಪಂಚಾಯಿತಿ ಅವರಣದಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ, ಹಾಗೂ

ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಅಸ್ಕಿನಾ ಸಭಾಂಗಣ, ಚರ್ಚ್ ಕಾಂಪೌಂಡ್. ಗೋಣಿಬೀಡು ಬೇಲೂರು ರಸ್ತೆ , ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ನಯನಾ ಮೋಟಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಭೆಗಳು ನಡೆಯುವ ಸ್ಥಳಗಳಲ್ಲಿ ಇಲಾಖಾವಾರು ವಿಶೇಷ ಕೌಂಟರ್‍ಗಳನ್ನು ಸ್ಥಾಪಿಸಲಾಗುವುದು. ಸಾರ್ವಜನಿಕರು ಸಲ್ಲಿಸುವ ಎಲ್ಲಾ ಅರ್ಜಿಗಳನ್ನು ಸ್ಥಳದಲ್ಲಿಯೇ  https://ipgrs.karnataka.gov.in  ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡಿ ವಿಶಿಷ್ಟ ಸಂಖ್ಯೆ ಇರುವ ಆನ್‍ಲೈನ್ ಸ್ವೀಕೃತಿ ಪತ್ರವನ್ನು ನೀಡಲಾಗುವುದು.

ಜಿಲ್ಲೆಯ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿ ಸಲ್ಲಿಸಬಹುದಾಗಿದ್ದು, ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

 

 

Leave a Reply

Your email address will not be published. Required fields are marked *