October 22, 2026
;
17Mudigere1A

 

 

ನವೆಂಬರ್ 6ರಂದು ಮೂಡಿಗೆರೆ ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ್ಷ ಬಿ.ಕೆ.ಲಕ್ಷ್ಮಣ್‍ಕುಮಾರ್ ಹೇಳಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 20ಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಹೆಸರಾಂತ ಸಾಹಿತಿ ಶ್ರೀ ಮೇಕನಗದ್ದೆ ಲಕ್ಷ್ಮಣಗೌಡ ಅವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.
ನವೆಂಬರ್ 6ರಂದು ಬೆಳಗ್ಗೆ 9 ಗಂಟೆಗೆ ರಾಷ್ಟ್ರಧ್ವಜ, ನಾಡಧ್ವಜ, ಪರಿಷತ್ ಧ್ವಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದು, ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ.
ಬಳಿಕ  ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್.ಶಂಕರ್ ನೆರವೇರಿಸಲಿದ್ದಾರೆ.
ಪ್ರಸ್ತುತ ಮಲೆನಾಡಿಗರ ಆತಂಕಕ್ಕೆ ಕಾರಣವಾಗಿರುವ ಕಸ್ತೂರಿ ರಂಗನ್ ವರದಿ ಬಗ್ಗೆ ವಿಚಾರಗೋಷ್ಠಿ ನಡೆಯಲಿದ್ದು, ಆ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ 50 ಪುಟದ ಕನ್ನಡ ಪುಸ್ತಕವೊಂದನ್ನು ಬಿಡುಗಡೆಗೊಳಿಸಲಾಗುವುದು ಎಂದು ಹೇಳಿದರು. ನಂತರ ಸರಕಾರಿ ಶಾಲೆಗಳ ಅಳಿವು ಉಳಿವಿನ ಬಗ್ಗೆ ಗೋಷ್ಠಿ ನಡೆಯಲಿದೆ.
ಚಿಕ್ಕಮಗಳೂರು ಐಡಿಎಸ್‍ಜಿ ಕಾಲೇಜು ಪ್ರಾಂಶುಪಾಲ ಎಚ್.ಎಂ.ಮಹೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಾಹಿತ್ಯ ಸಿರಿ ಮತ್ತು ಕನ್ನಡ ಸಿರಿ ಪ್ರಶಸ್ತಿಗಳನ್ನು ವಿತರಿಸಲಾಗುತ್ತದೆ. ನಂತರ ಸ್ಥಳೀಯ ಕಲಾವಿದರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳು, ಸಾರ್ವಜನಿಕರು  ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮೂಡಿಗೆರೆ ತಾಲ್ಲೂಕು ಅಧ್ಯಕ್ಷ ಡಿ.ಕೆ.ಲಕ್ಷ್ಮಣಗೌಡ, ಸಮ್ಮೇಳನದ ಪ್ರಧಾನ ಸಂಚಾಲಕ ಪೂರ್ಣೇಶ್‍ಮೂರ್ತಿ, ಖಜಾಂಚಿ ವಿ.ಪಿ.ನಾರಾಯಣ,  ಜಿಲ್ಲಾ ಸಂಚಾಲಕ ಗಣೇಶ್ ಮಗ್ಗಲಮಕ್ಕಿ, ನಿಕಟಪೂರ್ವ ಅಧ್ಯಕ್ಷ ಶಾಂತಕುಮಾರ್, ಪರಿಷತ್ತಿನ ತಾಲ್ಲೂಕು ಕಾರ್ಯದರ್ಶಿ ಸುಚಿತ್ರ ಪ್ರಸನ್ನ,  ಕಸಬಾ ಹೋಬಳಿ ಅಧ್ಯಕ್ಷ ಕುನ್ನಳ್ಳಿ ರವಿ, ಪ್ರಚಾರ ಸಮಿತಿ ಅಧ್ಯಕ್ಷ ಸಂತೋಷ್ ಅತ್ತಿಗೆರೆ ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *