October 24, 2026
;
rain in coffee

 

 

ಮುಂದಿನ ಐದು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಅಥವಾ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ಅನೇಕ ಕಡೆಗಳಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗಲಿದ್ದು, ಗಾಳಿಯು ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣ ಹವೆ ಇರಲಿದೆ.

ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣದಿಂದ ಕೂಡಿದ ಗುಡುಗು ಸಹಿತ ಮಳೆಯಾಗಲಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ.

ಶನಿವಾರ, ಭಾನುವಾರ ಸೋಮವಾರ, ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡುಗು, ಮಂಡ್ಯ, ತುಮಕೂರು ಜಿಲ್ಲೆ ಸೇರಿದಂತೆ ಕೆಲವೆಡೆ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

 

 

Leave a Reply

Your email address will not be published. Required fields are marked *