October 31, 2026
;
guddali 2

 

 

ಮೂಡಿಗೆರೆ ಸಕಲೇಶಪುರ ತಾಲ್ಲೂಕುಗಳ ಗಡಿಭಾಗದ ದೇವರುಂದ ಜಪಾವತಿ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು.

ಬಹುವರ್ಷಗಳಿಂದ ಈ ರಸ್ತೆ ಮತ್ತು ಸೇತುವೆ ಶಿಥಿಲಾವಸ್ಥೆಗೆ ತಲುಪಿ ಜನರ ಮತ್ತು ವಾಹನ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿತ್ತು. ಪ್ರಮುಖ ಪ್ರವಾಸಿ ತಾಣಗಳಿಗೆ ಇದು ಸಂಪರ್ಕ ರಸ್ತೆಯಾಗಿದ್ದು, ನಿತ್ಯ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಆದರೆ ಸುಮಾರು 2 ಕಿಲೋ ಮೀಟರ್ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ಹರಸಾಹಸ ಪಡುವಂತಾಗಿತ್ತು. ಹಾಗೆಯೇ ಜಪಾವತಿ ಸೇತುವೆಯು ಕಿರಿದಾಗಿ ಜೊತೆಗೆ ಶಿಥಿಲಾವಸ್ಥೆಗೆ ತಲುಪಿತ್ತು.
ಇದೀಗ ಮೂಡಿಗೆರೆ ಶಾಸಕರು ಈ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ಅನುದಾನ ನೀಡಿರುವುದು ಈ ಭಾಗದ ಜನರಿಗೆ ಹರ್ಷವನ್ನುಂಟುಮಾಡಿದೆ. ಗುಣಮಟ್ಟದ ಕಾಮಗಾರಿ ನಡೆದು ಉತ್ತಮ ರಸ್ತೆ ಮತ್ತು ಸೇತುವೆ ನಿರ್ಮಾಣವಾಗಬೇಕು ಎಂದು ಜನರು ಅಭಿಲಾಷೆ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಗೋಣಿಬೀಡು ಹೋಬಳಿ ಕಾಂಗ್ರೇಸ್ ಅಧ್ಯಕ್ಷ ಎ.ಜಿ. ಸುಬ್ರಾಯಗೌಡ ಮಾತನಾಡಿ ಮೂಡಿಗೆರೆ ಮತ್ತು ಸಕಲೇಶಪುರ ಗಡಿ ಭಾಗವಾಗಿದ್ದರಿಂದ ಇಲ್ಲಿಗೆ ಅನುದಾನ ಸಿಗದೇ ಅಭಿವೃದ್ಧಿ ಸಾಧ್ಯವಾಗಿರಲಿಲ್ಲ. ಶಾಸಕರು ಈ ಬಗ್ಗೆ ಮುತುವರ್ಜಿ ವಹಿಸಿ, ಲೋಕೋಪಯೋಗಿ ಸಚಿವರ ಗಮನ ಸೆಳೆದು 9.ಕೋಟಿ ರೂ ಅನುದಾನ ತಂದಿದ್ದಾರೆ. ಇದರಿಂದ ದೇವವೃಂದ ರಸ್ತೆ, ಸೇತುವೆ ಹಾಗೂ ಸಿಸಿ ರಸ್ತೆ ನಿರ್ಮಾಣವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರುಗಳು, ಕಾಂಗ್ರೇಸ್ ಪಕ್ಷದ ಪದಾಧಿಕಾರಿಗಳು, ಗ್ರಾಮಸ್ಥರು,ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *