November 1, 2026
;
janapada_page-0001

 

 

ವಿದ್ಯಾರ್ಥಿಗಳು ಮತ್ತು ಯುವಜನತೆಯಲ್ಲಿ ನಾಡು,ನುಡಿ,  ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕøತಿಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಪರಿಷತ್ ವಿದ್ಯಾರ್ಥಿಗಳ ನಡಿಗೆ ನಾಡು,ನುಡಿ ಮತ್ತು ಜಾನಪದದ ಕಡೆಗೆ ಅಭಿಯಾನವನ್ನು ಆರಂಭಿಸಲಿದೆ.

ನಗರದ ಬೇಲೂರು ರಸ್ತೆಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ನ 9 ರಂದು ಬೆಳಿಗ್ಗೆ 10.30 ಕ್ಕೆ ಶಾಸಕ ಹೆಚ್.ಡಿ. ತಮ್ಮಯ್ಯ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ನಾಡಿನ ಖ್ಯಾತ ಹಿರಿಯ ಜಾನಪದ ಗಾಯಕ ಡಾ ಅಪ್ಪಗೆರೆ ತಿಮ್ಮರಾಜು, ಆಶಾಕಿರಣ ಅಂಧ ಮಕ್ಕಳ ಶಾಲೆಯ ಅಧ್ಯಕ್ಷ ಡಾ.ಜೆ.ಪಿ.ಕೃμÉ್ಣೀಗೌಡ,ಸಾಹಿತಿ ಬಿ. ತಿಪ್ಪೇರುದ್ರಪ್ಪ, ಹಿರಿಯ ಪತ್ರಕರ್ತ ಸ. ಗಿರಿಜಾ ಶಂಕರ್,ಗಾಯಕ ಮಲ್ಲಿಗೆ ಸುಧೀರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ. ಸುರೇಶ್ ತಿಳಿಸಿದ್ದಾರೆ.

ಆಧುನಿಕತೆಯ ಗೀಳು ಮತ್ತು ಪಾಶ್ಚಾತ್ಯ ಸಂಸ್ಕೃತಿಯ ಅತಿಯಾದ ವ್ಯಾಮೋಹದಿಂದಾಗಿ ಇಂದಿನ ವಿದ್ಯಾರ್ಥಿಗಳು ಮತ್ತು ಯುವಜನತೆ ನಮ್ಮ ನಾಡು,ನುಡಿ,ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಮರೆತು ಅದರಿಂದ ದಿನೇ ದಿನೇ ದೂರವಾಗುತ್ತಿದ್ದಾರೆ, ಇದರಿಂದಾಗಿ ಕನ್ನಡ ಭಾಷೆ, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ನಾಡಿನಲ್ಲಿ ಕಣ್ಮರೆಯಾಗುತ್ತಿದೆ, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನತೆಯನ್ನು ಮತ್ತೆ ನಾಡು, ನುಡಿ, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯತ್ತ ಕರೆತರುವ ನಿಟ್ಟಿನಲ್ಲಿ ಈ ಅಭಿಯಾನವನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

ಅಭಿಯಾನದ ಅಂಗವಾಗಿ ಇಡೀ ವರ್ಷ ಜಿಲ್ಲೆಯ 300ಕ್ಕೂ ಹೆಚ್ಚು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡಿಗೆ ನಾಡು,ನುಡಿ ಮತ್ತು ಜಾನಪದದ ಕಡೆಗೆ ಕಾರ್ಯಕ್ರಮವನ್ನು ನಡೆಸಲಾಗುವುದು, ಜಾನಪದ ಕಲಾವಿದರು ಮತ್ತು ಸಾಹಿತಿಗಳಿಂದ ತರಬೇತಿ ಕಾರ್ಯಾ ಗಾರಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

 

 

Leave a Reply

Your email address will not be published. Required fields are marked *