November 2, 2026
;
zp ceo meenaxi arya

 

 

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಇಓ) ಗಳಾಗಿ ಶ್ರೀಮತಿ ಮೀನಾಕ್ಷಿ ಆರ್ಯ ಅಧಿಕಾರ ವಹಿಸಿಕೊಂಡಿದ್ದಾರೆ.

ಮುಂಚೆ ಈ ಹುದ್ದೆಯಲ್ಲಿದ್ದ ಕೀರ್ತನಾ ಎಚ್. ಎಸ್. ಅವರನ್ನು ಹುಬ್ಬಳ್ಳಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ.

ಕೀರ್ತನಾ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕುಮಾರಿ ಮೀನಾಕ್ಷಿ ಆರ್ಯ ಅವರನ್ನು ಚಿಕ್ಕಮಗಳೂರು ಜಿ.ಪಂ. ನೂತನ ಸಿಇಓ ಆಗಿ ಸರ್ಕಾರ ನೇಮಕ ಮಾಡಿದೆ.  ಅವರು  ಅಕ್ಟೋಬರ್ 30 ರಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಹುದ್ದೆಯ ಅಧಿಕಾರವನ್ನು ವಹಿಸಿಕೊಂಡಿದ್ದಾರೆ.

ಇವರು  ಈ ಹಿಂದೆ ಮಂಗಳೂರು ಉಪ-ವಿಭಾಗದ ಉಪವಿಭಾಗಾಧಿಕಾರಿ ಹುದ್ದೆಯಲ್ಲಿ ಕರ್ತವ್ಯನಿರ್ವಹಿಸಿರುತ್ತಾರೆ.

ಮೀನಾಕ್ಷಿ ಆರ್ಯ ಅವರು 2023ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ. ಉತ್ತರಖಂಡ ಮೂಲದ ಮೀನಾಕ್ಷಿ ಆರ್ಯ ಕಂಪ್ಯೂಟರ್ ಸೈನ್ಸ್  ಇಂಜಿನಿಯರಿಂಗ್ ನಲ್ಲಿ ಬಿ ಟೆಕ್ ಪದವಿದರರು.

 

 

Leave a Reply

Your email address will not be published. Required fields are marked *