November 4, 2026
;
heater 2

 

 

ಮನೆಯಲ್ಲಿ ಸ್ನಾನಕ್ಕೆ ನೀರು ಕಾಯಿಸಲು ವಾಟರ್ ಹೀಟರ್ ಹಾಕಿದ್ದ ಬಕೆಟ್ ನ ನೀರುಮುಟ್ಟಿದ 8 ವರ್ಷದ ಬಾಲಕ ವಿದ್ಯುತ್ ಶಾಕ್‌ನಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಈ ದುರಂತ ಸಂಭವಿಸಿದೆ.  ಮೃತ ಬಾಲಕನನ್ನು 2ನೇ ತರಗತಿಯಲ್ಲಿ ಓದುತ್ತಿದ್ದ ನೀಲಾಂಶ್ (8) ಎಂದು ಗುರುತಿಸಲಾಗಿದೆ.

ಭಾನುವಾರ ನವೆಂಬರ್ 1ರಂದು ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಬಾಲಕ ಮನೆಯಲ್ಲಿ  ಇದ್ದ ಎನ್ನಲಾಗಿದೆ. ಈ ವೇಳೆ ಸ್ನಾನಕ್ಕೆ ನೀರು ಕಾಯಿಸಲು ಬಕೆಟ್‌ನಲ್ಲಿ ವಾಟರ್ ಹೀಟರ್ ಹಾಕಲಾಗಿತ್ತು. ಬಾಲಕ ಬಕೆಟ್ ನೀರಿಗೆ ಕೈ ಹಾಕಿದ್ದು, ತೀವ್ರ ವಿದ್ಯುತ್ ಶಾಕ್ ನಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ವಿದ್ಯುತ್ ಆಘಾತಕ್ಕೆ  ಒಳಗಾದ ಬಾಲಕ ತೀವ್ರ ಅಸ್ವಸ್ಥನಾಗಿದ್ದಾನೆ. ತಕ್ಷಣವೇ ಆತನನ್ನು ರಕ್ಷಿಸಿ ಚಿಕಿತ್ಸೆ ಕೊಡಿಸಲು ಪ್ರಯತ್ನಿಸಲಾಯಿತಾದರೂ, ವೈದ್ಯಕೀಯ ನೆರವು ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು,  ಕುಟುಂಬದಲ್ಲಿ ಶೋಕದ ವಾತಾವರಣ ಆವರಿಸಿದೆ. ಈ ಸಂಬಂಧ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Leave a Reply

Your email address will not be published. Required fields are marked *