ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗೌಡಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ವಿವಿಧ ವಿಭಾಗಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.


ಸಮಾರಂಭದಲ್ಲಿ ಮೇಕನಗದ್ದೆ ಸುತ್ತಮುತ್ತಲ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿ ಶುಭ ಹಾರೈಸಿದರು. ಶಾಲೆಯ ನಿವೃತ್ತ ಶಿಕ್ಷಕರುಗಳನ್ನು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸಲಾಯಿತು.


ಗ್ರಾಮದ ಯುವಕರು, ಗ್ರಾಮಸ್ಥರು, ಶಾಲಾ ಶಿಕ್ಷಕರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಿಕೊಟ್ಟರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.



