November 5, 2026
;
raitha1

 

 

ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ವೈಜ್ಞಾನಿಕ ಹಾಗೂ ನ್ಯಾಯಸಮ್ಮತ ಬೆಲೆ ನಿಗದಿಪಡಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಆರೋಪಿಸಿದೆ.

ಈ ಬಗ್ಗೆ ಹೇಳಿಕೆ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಡಿ.ಆರ್.ಪುಟ್ಟಸ್ವಾಮಿಗೌಡ ಮತ್ತು ಡಿ.ಎಸ್.ರಮೇಶ್ ಗೌಡ ಅವರು ಹೇಳಿಕೆ ನೀಡಿದ್ದಾರೆ.

ಪ್ರತಿ ವರ್ಷ ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಕಬ್ಬು ಬೆಳೆಗಾರರ ನಡುವೆ ಒಮ್ಮತ ಮೂಡದೆ, ರೈತರು ಹೋರಾಟದ ಹಾದಿ ಹಿಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿ ಉತ್ಪಾದನೆಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಲ್ಲಿ ಸರ್ಕಾರಗಳು ವಿಫಲವಾಗಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ ಎಂದು ಸಂಘ ಅಭಿಪ್ರಾಯಪಟ್ಟಿದೆ.

ಸಕ್ಕರೆ ಕಾರ್ಖಾನೆಗಳ ಮಾಲೀಕರೇ ಶಾಸಕರು ಹಾಗೂ ಸಚಿವರಾಗಿರುವ ಹಿನ್ನೆಲೆಯಲ್ಲಿ ಆಡಳಿತ ಪಕ್ಷವು ರೈತರ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳದೆ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂಬ ಅನುಮಾನ ಮೂಡುತ್ತಿದೆ. ರಾಜಕಾರಣಿಗಳು ವ್ಯಾಪಾರ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತಿರುವುದರಿಂದ ರೈತರಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಸಂಘ ಅಸಮಾಧಾನ ವ್ಯಕ್ತಪಡಿಸಿದೆ.

ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಬ್ಬು ಬೆಳೆಗಾರರಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಹಾಗೂ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.

 

 

Leave a Reply

Your email address will not be published. Required fields are marked *