ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಗಿಫ್ಟ್ ನೀಡಿದ್ದು, ತುಟ್ಟಿಭತ್ಯೆ (DA)ಯನ್ನು ಶೇಕಡಾ 2.25 ರಷ್ಟು ಹೆಚ್ಚಿಸಿ ಗುರುವಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ. 15. 75 ರಿಂದ ಶೇ. 18ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದ್ದು, ಪರಿಷ್ಕೃತ ತುಟ್ಟಿಭತ್ಯೆಯು 2026ರ ಜುಲೈ 1ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯ ಸರ್ಕಾರದ ಈ ನಿರ್ಧಾರದಿಂದಾಗಿ ನೌಕರರ ತುಟ್ಟಿಭತ್ಯೆಯು ಮೂಲ ವೇತನದ (Basic Pay) ಶೇ. 15.75ರಿಂದ ಶೇ. 18ಕ್ಕೆ ಏರಿಕೆಯಾಗಲಿದೆ.
ತುಟ್ಟಿಭತ್ಯೆ ಹೆಚ್ಚಳದಿಂದ ನೌಕರರ ಮೂಲ ವೇತನಕ್ಕೆ ಅನುಗುಣವಾಗಿ ಮಾಸಿಕ ಸಂಬಳದಲ್ಲಿ ಏರಿಕೆಯಾಗಲಿದೆ.


