November 14, 2026
;
krishi app

 

 

ಕೇಂದ್ರ ಸರ್ಕಾರವು ದೇಶಾದ್ಯಂತ ರಸಗೊಬ್ಬರ ಮಾರಾಟ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಸಮರ್ಪಕ ನಿರ್ವಹಣೆ ಹಾಗೂ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ಲಭ್ಯವಾಗುವಂತೆ ಮಾಡಲು Fertilizer Sales Application System (FSAS) ಅಡಿಯಲ್ಲಿ ‘Framework for Fertilizer Sale App’ ಎಂಬ ನೂತನ ಮೊಬೈಲ್ ಆಧಾರಿತ ವ್ಯವಸ್ಥೆಯನ್ನು ಪರಿಚಯಿಸುತ್ತಿದೆ.

ಈ ಬಗ್ಗೆ ಚಿಕ್ಕಮಗಳೂರು ಜಂಟಿ ಕೃಷಿ ನಿರ್ದೇಶಕರ ಕಛೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ವ್ಯವಸ್ಥೆಯ ಮೂಲಕ:

ರೈತರು ರಸಗೊಬ್ಬರದ ಸಮರ್ಪಕ ಲಭ್ಯತೆ ಖಚಿತಪಡಿಸಿಕೊಳ್ಳಬಹುದಾಗಿರುತ್ತದೆ.

ಮುಂಗಡ ಯೋಜನೆಯ ಮೂಲಕ ಕೊರತೆಯನ್ನು ತಡೆಗಟ್ಟಬಹುದು.

ನಿಜವಾದ ರೈತರಿಗೆ ಆದ್ಯತೆ ನೀಡಲಾಗುತ್ತದೆ.

ಬಾಡಿಗೆ ರೈತರು ಹಾಗೂ ವಿಶೇಷ ವರ್ಗದ ಕೃಷಿಕರಿಗೂ ಸಮಾನ ಅವಕಾಶ ಕಲ್ಪಿಸಲಾಗುತ್ತದೆ.

ಆಧಾರ್ ಆಧಾರಿತ ಪರಿಶೀಲನೆಯಿಂದ ದುರುಪಯೋಗವನ್ನು ನಿಯಂತ್ರಿಸಲಾಗುತ್ತದೆ.

ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಪರಿಣಾಮಕಾರಿ ಮೇಲ್ವಿಚಾರಣೆ ಸಾಧ್ಯವಾಗುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ರೈತರು ಈ ನೂತನ ಡಿಜಿಟಲ್ ರಸಗೊಬ್ಬರ ಮಾರಾಟ ವ್ಯವಸ್ಥೆಯ ಕುರಿತು ಮಾಹಿತಿ ಪಡೆದುಕೊಂಡು, ತಮ್ಮ ಮೊಬೈಲ್‌ಗಳಲ್ಲಿ ಆ್ಯಪ್ ಬಳಕೆಗೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಬೇಕು. ರಸಗೊಬ್ಬರ ಖರೀದಿಸುವ ಸಂದರ್ಭದಲ್ಲಿ ತಮ್ಮ ಆಧಾರ್ ವಿವರಗಳು ಮತ್ತು ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ರೈತರಿಗೆ ಈ ವ್ಯವಸ್ಥೆಯ ಕುರಿತು ಯಾವುದೇ ಗೊಂದಲ ಅಥವಾ ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಹಾಗೂ ಮಾರ್ಗದರ್ಶನ ಪಡೆಯಬಹುದು. ಮುಂದಿನ ದಿನಗಳಲ್ಲಿ ಈ ಡಿಜಿಟಲ್ ವ್ಯವಸ್ಥೆಯ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲೆಯ ಎಲ್ಲಾ ರೈತರು, ರಸಗೊಬ್ಬರ ವಿತರಕರು ಮತ್ತು ಮಾರಾಟಗಾರರು ಸಹಕರಿಸುವಂತೆ ಕೋರಿದ್ದಾರೆ.

 

 

 

 

 

 

 

Leave a Reply

Your email address will not be published. Required fields are marked *