November 14, 2026
;
praja 2

 

 

ನಾಗರಿಕರಿಂದ ಕುಂದು ಕೊರತೆಗಳ ಮನವಿ ಸ್ವೀಕರಿಸಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 14 ರ ಶನಿವಾರದಂದು ಪ್ರಜಾ ಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕು ಆಲ್ದೂರು ಹೋಬಳಿ ಸತ್ತಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಭಾ ಭವನದಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ನಯನಾ ಮೋಟಮ್ಮ ಅವರ ಅಧ್ಯಕ್ಷತೆಯಲ್ಲಿ., ಕಡೂರು ತಾಲ್ಲೂಕು, ಕಸಬಾ ಹೋಬಳಿ, ಸರಸ್ವತಿಪುರದಲ್ಲಿ ಕಡೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಆನಂದ್ ಅವರ ಅಧ್ಯಕ್ಷತೆಯಲ್ಲಿ, ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಹೋಬಳಿ ಬರಗೇನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ, ಹಾಗೂ ಎನ್.ಆರ್.ಪುರ ತಾಲ್ಲೂಕಿನ ಕಸಬ ಹೋಬಳಿಯ ಶೆಟ್ಟಿಕೊಪ್ಪ ಶ್ರೀ ಸಿದ್ದಿವಿನಾಯಕ ಗಣಪತಿ ಪೆಂಡಾಲ್ ಆವರಣದಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11.00 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.

ಸಭೆಗಳು ನಡೆಯುವ ಸ್ಥಳಗಳಲ್ಲಿ ಇಲಾಖಾವಾರು ವಿಶೇಷ ಕೌಂಟರ್‌ಗಳನ್ನು ಸ್ಥಾಪಿಸಲಾಗುವುದು. ಸಾರ್ವಜನಿಕರು ಸಲ್ಲಿಸುವ ಎಲ್ಲಾ ಅರ್ಜಿಗಳನ್ನು ಸ್ಥಳದಲ್ಲಿಯೇ https://ipgrs.karnataka.gov.inಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ವಿಶಿಷ್ಟ ಸಂಖ್ಯೆ ಇರುವ ಆನ್‌ಲೈನ್ ಸ್ವೀಕೃತಿ ಪತ್ರವನ್ನು ನೀಡಲಾಗುವುದು.

ಜಿಲ್ಲೆಯ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬAಧಿಸಿದಂತೆ ಮನವಿ ಸಲ್ಲಿಸಬಹುದಾಗಿದ್ದು, ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

 

 

Leave a Reply

Your email address will not be published. Required fields are marked *