November 19, 2026
;
suddi-4 (1)

 

 

ಆಧುನಿಕ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ ಯುಗದಲ್ಲಿ ನಕಲಿ ಮಾಹಿತಿಗಳ ಹಾವಳಿ ಹೆಚ್ಚಾಗಿದ್ದು, ಜನರಲ್ಲಿಯೂ ಜಾಗೃತಿ ಮೂಡಿದೆ. ಇಂತಹ ಸವಾಲಿನ ಸಂದರ್ಭದಲ್ಲಿ ಪೊಲೀಸ್ ಇಲಾಖೆಯು ಅತ್ಯಂತ ಎಚ್ಚರಿಕೆಯಿಂದ, ಕಟ್ಟುನಿಟ್ಟಾಗಿ ಮತ್ತು ಶಿಸ್ತಿನಿಂದ ಕಾರ್ಯನಿರ್ವಹಿಸುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ `ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2026’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

`ಹಬ್ಬ, ಉತ್ಸವ ಸೇರಿದಂತೆ ಸಾರ್ವಜನಿಕರು ಸಂಭ್ರಮಿಸುವ ಸಂದರ್ಭಗಳಲ್ಲೂ ಪೆÇಲೀಸ್ ಸಿಬ್ಬಂದಿ ರಜೆ ಇಲ್ಲದೆ, ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುತ್ತಾರೆ. ನಿರಂತರ ಕೆಲಸದ ಒತ್ತಡದಿಂದ ಹೊರಬರಲು, ಸಿಬ್ಬಂದಿಯಲ್ಲಿ ಒಗ್ಗಟ್ಟು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಲು ಇಂತಹ ವಾರ್ಷಿಕ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ ಎಂದರು.

ವಿವಿಧ ತಾಲ್ಲೂಕುಗಳ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದೆಡೆ ಸೇರಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಕ್ರೀಡಾಕೂಟ ಸಹಕಾರಿಯಾಗಿದೆ. ಕವಾಯತಿನಲ್ಲಿ ಆರು ತಂಡಗಳು ಪ್ರದರ್ಶಿಸಿದ ಶಿಸ್ತು ಇಲಾಖೆಯ ಕಾರ್ಯವೈಖರಿಯಲ್ಲೂ ಪ್ರತಿಫಲಿಸಬೇಕು. ಎಲ್ಲರೂ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಳ್ಳಿ ಎಂದು ಶುಭ ಹಾರೈಸಿದರು.

ಹೆಚ್ಚುವರಿ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ ಜಯಕುಮಾರ್ ದಯಾಮ ಮಾತನಾಡಿ, ಜಿಲ್ಲಾ ಪೆÇಲೀಸ್ ವಾರ್ಷಿಕ ಕ್ರೀಡಾಕೂಟದ ಯಶಸ್ಸಿಗೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಕ್ರೀಡಾಪಟುಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಕ್ರೀಡಾಕೂಟದಲ್ಲಿ ಒಟ್ಟು ಆರು ತಂಡಗಳ ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸುತ್ತಿದ್ದು, ಕ್ರೀಡಾಸ್ಫೂರ್ತಿಯಿಂದ ಪಂದ್ಯಾವಳಿಗಳನ್ನು ಯಶಸ್ವಿಗೊಳಿಸಬೇಕು ಎಂದು ಆಶಿಸಿದರು.

ಸಮಾರಂಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

 

 

Leave a Reply

Your email address will not be published. Required fields are marked *