November 19, 2026
;
kaadu 2

 

 

ಹಾಸನದಲ್ಲಿ ಕಾಡಾನೆ ದಾಳಿ ಪ್ರಕರಣಗಳು ಬೆನ್ನಲ್ಲೇ ಇದೀಗ ಚಿಕ್ಕಮಗಳೂರಿನಲ್ಲೂ ಕಾಡಾನೆಯೊಂದು ದಾಳಿ ಮಾಡಿ ರೈತನೊಬ್ಬನ್ನು ಕೊಂದು ಹಾಕಿದೆ. ಚಿಕ್ಕಮಗಳೂರಿನ N.R.ಪುರ ತಾಲೂಕಿನ ಹೆನ್ನಂಗಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಓರ್ವ ರೈತ ಸಾವನ್ನಪ್ಪಿದ್ದಾರೆ.

ಕಾಡಾನೆ ದಾಳಿಗೆ 45 ವರ್ಷದ ರೈತ ಕೃಷ್ಣಮೂರ್ತಿ ಸಾವನ್ನಪ್ಪಿದ್ದಾರೆ. ತೋಟದಿಂದ ಮನೆಗೆ ಕೃಷ್ಣಮೂರ್ತಿ ಬರುತ್ತಿದ್ದ ವೇಳೆ ಏಕಾಏಕಿ ಎದುರಾದ ಕಾಡಾನೆ ದಾಳಿ ಮಾಡಿದೆ. ದಾಳಿಯಲ್ಲಿ ಕೃಷ್ಣಮೂರ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಈ ಭಾಗದಲ್ಲಿ ನಿರಂತರವಾಗಿ ಕಾಡಾನೆ ದಾಳಿಯಿಂದ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಮತ್ತೊಂದು ಜೀವ ಬಲಿಯಾಗಿದ್ದು, ಜನರು ತೀವ್ರ ಆಕ್ರೋಶಿತರಾಗಿದ್ದಾರೆ.

 

 

Leave a Reply

Your email address will not be published. Required fields are marked *