ಶ್ರೀನಾರಾಯಣಗುರು ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ .ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮೂಲಕ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆಗಳು ಹಿಂದುಳಿದ ವರ್ಗಗಳ ಪ್ರವರ್ಗ-2ಎ ಬರುವ ಈಡಿಗಾ ಮತ್ತು ಬಿಲ್ಲವ ಇದರ ಉಪಜಾತಿಗೆ ಅನ್ವಯವಾಗುತ್ತದೆ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ 90.000/-ಗಳಿಗಿಂತ ಮತ್ತು ಪಟ್ಟಣ ಪ್ರದೇಶದವರಿಗೆ ರೂ. 1,20,000/- ಗಳಿಗಿಂತ ಒಳಗಿರಬೇಕು. ಒಂದು ಬಾರಿ ನಿಗಮಗಳಿಂದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಅರ್ಜಿಗಳನ್ನು ಸೇವಾಸಿಂಧೂ ವೆಬ್ ಸೈಟ್ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 13 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ (ವೆಬ್ ಸೈಟ್ http://www.bcwd.karnataka.gov.


