November 22, 2026
;
rudset

 

 

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಡಿಸೆಂಬರ್ 07 ರಂದು 13 ದಿನಗಳ ಸಿ ಸಿ ಟಿ ವಿ ನಿರ್ವಹಣೆ ಹಾಗೂ  ಡಿಸೆಂಬರ್ 14 ರಂದು 10 ದಿನಗಳ ಅಣಬೆ ಕೃಷಿ   ತರಬೇತಿಯನ್ನು ಆಯೋಜಿಸಲಾಗಿದೆ. ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ (ಮೊ.ಸಂ 9481506564, 9380162042, 9740982585, 9241482541, 9113880324)ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ಗಿರಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Leave a Reply

Your email address will not be published. Required fields are marked *