ಸಂವಿಧಾನ ದಿನಾಚರಣೆ ಅಂಗವಾಗಿ ಚಿಕ್ಕಮಗಳೂರು ಬಿಜೆಪಿ ವತಿಯಿಂದ ನಗರದ ದೀಪಾ ನರ್ಸಿಂಗ್ ಹೋಂ ಸಮೀಪ ಗುರುವಾರ ಸಂಜೆ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಡಾ|| ಬಿ.ಆರ್.ಅಂಭೇಡ್ಕರ್ ರಸ್ತೆ ಎಂಬ ನೂತನ ನಾಮ ಫಲಕವನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಕಾರ್ಯದಶಿ ್ ಸೀತರಾಮಭರಣ್ಯ, ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ಬಿಜೆಪಿ ನಗರ ಮಂಡಲ ಅಧ್ಯಕ್ಷ ಪುಷ್ಪರಾಜ್, ನಗರಸಭೆ ಅಧ್ಯಕ್ಷೆ ಭವ್ಯ ಮಂಜುನಾಥ್, ಉಪಾಧ್ಯಕ್ಷೆ ಲಲಿತಾ ರವಿನಾಯ್ಕ್, ಮುಖಂಡರುಗಳಾದ ಜೆ.ಡಿ. ಲೋಕೇಶ್, ಮಹೇಶ್, ಪುಟ್ಟಸ್ವಾಮಿ, ಮುತ್ತಯ್ಯ ಸೇರಿದಂತೆ ಮುಂತಾದವರು ಹಾಜರಿದ್ದರು.


