coffee-board

 

 

ಕಾಫಿ ಮಂಡಳಿ ವತಿಯಿಂದ ಕಾಫಿ ಕ್ಯೂರಿಂಗ್ ಮತ್ತು ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಅಹ್ವಾನಿಸಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಕಾಫಿ ಕ್ಯೂರಿಂಗ್  ಮತ್ತು ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಕಾರ್ಮಿಕರ ಮಕ್ಕಳಿಗೆ ಇದು ಅನ್ವಯವಾಗುತ್ತದೆ.

ಎಸ್.ಎಸ್.ಎಲ್.ಸಿ, ಪ್ರಥಮ ಪಿ.ಯು.ಸಿ., ಪದವಿ ಮತ್ತು ಅದಕ್ಕೆ ಮೇಲ್ಪಟ್ಟ ವಿವಿಧ ಕೋರ್ಸ್‍ಗಳನ್ನು ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಆಯಾ ತಾಲ್ಲೂಕಿನ ಕಾಫಿ ಮಂಡಳಿ ಕಛೇರಿಯಲ್ಲಿ ಪಡೆಯಬಹುದಾಗಿರುತ್ತದೆ.

ಅರ್ಜಿಯೊಂದಿಗೆ ನೀಡುವ ದೃಡೀಕರಣ ಪತ್ರದಲ್ಲಿ ವ್ಯಾಸಾಂಗ ಮಾಡುತ್ತಿರುವ ಶಾಲಾ ಕಾಲೇಜಿನ ಮುಖ್ಯಸ್ಥರ ದೃಢೀಕರಣ ಮತ್ತು ಪೋಷಕರು ಕೆಲಸ ಮಾಡುತ್ತಿರುವ ಬಗ್ಗೆ ಎಸ್ಟೇಟ್ ಮಾಲೀಕರಿಂದ ಅಥವಾ ಕಾಫಿ ಕ್ಯೂರಿಂಗ್ ಮಾಲೀಕರಿಂದ ದೃಢೀಕರಣ ಸೀಲು ಸಹಿ ಪಡೆದು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಜನವರಿ 23, 2023 ಕೊನೆಯ ದಿನ.

ಅರ್ಜಿಗಳನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗೆ ಸಮೀಪದ ಕಾಫಿ ಮಂಡಳಿ ಕಛೇರಿಗಳನ್ನು ಸಂಪರ್ಕಿಸಬಹುದಾಗಿದೆ.

 

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ