hetthuru1

 

 

ಸಕಲೇಶಪುರ ತಾಲ್ಲೂಕು ಹೆತ್ತೂರು ಹೋಬಳಿ ಬೆಳೆಗಾರರ ಸಂಘದ ವತಿಯಿಂದ ನಿನ್ನೆ ಹೆತ್ತೂರಿನಲ್ಲಿ ಬೆಳೆಗಾರರ ಬೃಹತ್ ಸಮಾವೇಶ ಮತ್ತು ಹೆತ್ತೂರು ಬೆಳೆಗಾರರ ಭವನದ ನೂತನ ಮೇಲಂತಸ್ತು ಕಟ್ಟಡದ ಲೋಕಾರ್ಪಣೆ ಹಾಗೂ ಸಂಘದ ವಾರ್ಷಿಕ ಮಹಾಸಭೆ ಅದ್ದೂರಿಯಾಗಿ ನೆರವೇರಿತು.

ಹೆತ್ತೂರು ಹೋಬಳಿ ಬೆಳೆಗಾರರ ಸಂಘದ ಮೇಲಂತಸ್ತಿನ ಕಟ್ಟಡದಕ್ಕೆ ಬಾಚಿಹಳ್ಳಿ ಪ್ರತಾಪ್ ಗೌಡರು ಪ್ರಮುಖ ದಾನಿಗಳಾಗಿದ್ದಾರೆ.

ಸಮಾವೇಶದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ಪೂಜ್ಯ ಶ್ರೀ ನಿರ್ಮಲಾನಂದ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿ ನೆರೆದಿದ್ದ ಜನರಿಗೆ ಆಶೀರ್ವಚನ ನೀಡಿದರು ಮತ್ತು ಹೆತ್ತೂರು ಬೆಳೆಗಾರರ ಸಂಘದ ಕಾರ್ಯಚಟುವಟಿಕೆಗಳಿಗೆ ಶ್ಲಾಘನೆ ವ್ಯಕ್ತಪಡಿಸಿದರು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಹಾಸನ-ಕೊಡಗು ಕಾರ್ಯದರ್ಶಿ ಪೂಜ್ಯ ಶ್ರೀ ಶ್ರೀ ಶಂಭುನಾಥ ಸ್ವಾಮೀಜಿಯವರು ಪಾವನ ಸಾನಿಧ್ಯ ವಹಿಸಿದ್ದರು.

ಹಲವು ಗಣ್ಯ ಮಹಾನೀಯರು, ಕರ್ನಾಟಕ ಬೆಳೆಗಾರರ ಒಕ್ಕೂಟ ಸೇರಿದಂತೆ ವಿವಿಧ ಬೆಳೆಗಾರರ ಸಂಘಟನೆಗಳ ಅಧ್ಯಕ್ಷರು ಪಧಾದಿಕಾರಿಗಳು ಅತಿಥಿಗಳಾಗಿ ಭಾಗವಹಿಸಿದ್ದರು.

ಹೆತ್ತೂರು ಬೆಳೆಗಾರರ ಸಂಘದ ಅಧ್ಯಕ್ಷ ಎಂ.ಜೆ. ಸಚಿನ್ ಅಧ್ಯಕ್ಷತೆ ವಹಿಸಿದ್ದರು. ಸಮಾವೇಶದಲ್ಲಿ ಸಾವಿರಾರು ಬೆಳೆಗಾರರು, ಸಾರ್ವಜನಿಕರು ನೆರೆದಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ