arathi krishan 2

ಡಾ. ಆರತಿ ಕೃಷ್ಣ

 

 

ಅಖಿಲ ಭಾರತ ಕಾಂಗ್ರೇಸ್ ಸಮಿತಿ(ಎಐಸಿಸಿ) ಕಾರ್ಯದರ್ಶಿಯಾಗಿ ಡಾ. ಆರತಿ ಕೃಷ್ಣ ನೇಮಕವಾಗಿದ್ದಾರೆ. ಅವರಿಗೆ ಎಐಸಿಸಿ ಅನಿವಾಸಿ ಭಾರತೀಯ ವಿಭಾಗದ ಉಸ್ತುವಾರಿ ಕಾರ್ಯದರ್ಶಿಯಾಗಿ ಜವಾಬ್ದಾರಿ ನೀಡಲಾಗಿದೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಡಾ. ಆರತಿ ಕೃಷ್ಣ ಅವರು ನಮ್ಮ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದವರು. ಅವರ ತಂದೆ ಬೇಗಾನೆ ರಾಮಯ್ಯ ಶೃಂಗೇರಿ ಕ್ಷೇತ್ರದ ಶಾಸಕರಾಗಿದ್ದರು. ರಾಜ್ಯದಲ್ಲಿ ಗ್ರಾಮೀಣ ಅಭಿವೃದ್ಧಿ ಖಾತೆ ಸಚಿವರಾಗಿದ್ದರು.

ರಾಜಕೀಯ ಶಾಸ್ತ್ರದಲ್ಲಿ ಮತ್ತು ಅಮೇರಿಕಾದ ಜಾರ್ಜ್ ಮ್ಯಾಸನ್ ವಿಶ್ವವಿದ್ಯಾಲಯದಿಂದ ಇಂಟರ್ ನ್ಯಾಷನಲ್ ಕಾಮರ್ಸ್ ಮತ್ತು ಪಬ್ಲಿಕ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಾ. ಆರತಿ ಕೃಷ್ಣ ಅವರು ತಮ್ಮ ತಂದೆಯಂತೆಯೇ ಕಾಂಗ್ರೇಸ್ ಪಕ್ಷದ ಮೂಲಕ ರಾಜಕೀಯ ರಂಗದಲ್ಲಿ ಗುರುತಿಸಿಕೊಂಡು ಸಕ್ರಿಯರಾಗಿದ್ದಾರೆ.

ಅಮೇರಿಕಾದಲ್ಲಿ ಉದ್ದಿಮೆದಾರರಾಗಿದ್ದ ಕೃಷ್ಣ ಅವರನ್ನು ವಿವಾಹವಾದ ಆರತಿ ಅವರು ಮುಂದೆ ತಮ್ಮ ಪ್ರತಿಭೆ ಮತ್ತು ಜ್ಞಾನದಿಂದ ಅನಿವಾಸಿ ಭಾರತೀಯ ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುತ್ತಾರೆ.

ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಅನಿವಾಸಿ ಭಾರತೀಯ ವಿಭಾಗದ ಪ್ರಥಮ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದರು. ಅಮೇರಿಕಾದ ವಾಸಿಂಗ್ಟನ್ ಡಿಸಿ ಭಾರತೀಯ ರಾಯಭಾರಿ ಕಛೇರಿಯಲ್ಲಿ ಸಮುದಾಯ ಅಭಿವೃದ್ಧಿ ಅಧಿಕಾರಿಯಾಗಿ, ಅನಿವಾಸಿ ಭಾರತೀಯ ಸಚಿವಾಲಯದ ಇಂಡಿಯನ್ ಡೆವಲಪ್ ಮೆಂಟ್ ಫೌಂಡೇಷನ್ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಭಾರತದ ವಿದೇಶಾಂಗ ವ್ಯವಹಾರದಲ್ಲಿ ಸಾಕಷ್ಟು ಕೆಲಸ ಮಾಡಿರುವ ಆರತಿ ಕೃಷ್ಣ ಅನಿವಾಸಿ ಭಾರತೀಯರನ್ನು ಒಗ್ಗೂಡಿಸಿ ದೇಶದ ಅಭಿವೃದ್ಧಿಗೆ ಅವರ ಸಹಭಾಗಿತ್ವ ನೀಡುವುದಕ್ಕೆ ಪ್ರಮುಖ ಸೇತುವಾಗಿ ಕೆಲಸ ಮಾಡುತ್ತಿದ್ದಾರೆ.

ಕೃಷ್ಣ ಫೌಂಡೇಷನ್ ಎಂಬ ಸ್ವಯಂ ಸೇವಾ ಸಂಸ್ಥೆಯನ್ನು ಸ್ಥಾಪಿಸಿ ಆ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಸಂಭವನೀಯ ಅಭ್ಯರ್ಥಿಗಳಲ್ಲಿ ಡಾ. ಆರತಿ ಕೃಷ್ಣ ಅವರ ಹೆಸರು ಕೇಳಿಬಂದಿತ್ತು.

ರಾಜಕೀಯ ಮಹತ್ವಾಕಾಂಕ್ಷೆ ಹೊಂದಿರುವ ಡಾ. ಆರತಿ ಕೃಷ್ಣ ಅವರು ಉತ್ತಮ ಸಂವಹನ ಕೌಶಲ್ಯ, ಬಹುಭಾಷ ಜ್ಞಾನ ಹೊಂದಿದ್ದಾರೆ. ಇದೀಗ ಎಐಸಿಸಿ ಕಾರ್ಯದರ್ಶಿಯಾಗುವ ಮೂಲಕ ರಾಷ್ಟ್ರಮಟ್ಟದಲ್ಲಿ ತಮ್ಮ ರಾಜಕೀಯ ಛಾಪು ಮೂಡಿಸಲು ಅವರಿಗೆ ಉತ್ತಮ ಅವಕಾಶ ಒದಗಿಬಂದಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ