abvp 2

 

 

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎ.ಬಿ.ವಿ.ಪಿ.) ರಾಜ್ಯ ಕಾರ್ಯದರ್ಶಿಯಾಗಿ ಮಣಿಕಂಠ ಕಳಸ ಮರು ಆಯ್ಕೆ ಆಗಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಎ.ಬಿ.ವಿ.ಪಿ. ಸಂಘಟನೆಗೆ ಅನುಕೂಲವಾಗುವಂತೆ ಉತ್ತರ ಮತ್ತು ದಕ್ಷಿಣ ಕರ್ನಾಟಕ ಎಂದು ವಿಭಾಗ ಮಾಡಲಾಗಿದೆ.

ಕಳೆದ ಸಾಲಿನಲ್ಲಿ ಎಬಿವಿಪಿ ಕರ್ನಾಟಕ ರಾಜ್ಯ ಕಾರ್ಯದರ್ಶಿಯಾಗಿ ಒಂದು ವರ್ಷ ಕಾರ್ಯನಿರ್ವಹಿಸಿದ್ದ ಮಣಿಕಂಠ ಅವರನ್ನು ಈ ಸಾಲಿನಲ್ಲಿ ಕರ್ನಾಟಕ ಉತ್ತರದ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಎ.ಬಿ.ವಿ.ಪಿ. 42ನೇ ರಾಜ್ಯ ಸಮ್ಮೇಳನದಲ್ಲಿ ಈ ಆಯ್ಕೆ ಮಾಡಲಾಗಿದೆ.

ಮಣಿಕಂಠ ನಮ್ಮ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲ್ಲೂಕಿನವರು. ಮಂಗಳೂರಿನ ಎಸ್.ಡಿ.ಎಂ. ಲಾ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಾ ಕಳೆದ ಹಲವು ವರ್ಷಗಳಿಂದ ವಿದ್ಯಾರ್ಥಿ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.

ಮೊದಲು ಮಂಗಳೂರು ಕೇಂದ್ರವಾಗಿರಿಸಿಕೊಂಡು ಎಬಿವಿಪಿ ಸಂಘಟನೆಯಲ್ಲಿ ತೊಡಗಿದ್ದ ಇವರು ಪ್ರಸ್ತುತ ಹುಬ್ಬಳ್ಳಿಯನ್ನು ಕೇಂದ್ರವಾರಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ.

ಇದೇ ಸಂದರ್ಭದಲಿ ದಕ್ಷಿಣ ಕನ್ನಡ ಮೂಲದವರಾದ ಡಾ. ರೋಹಿಣಾಕ್ಷ ಶಿರ್ಲಾಲು ಎ.ಬಿ.ವಿ.ಪಿ. ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ಸ್ವೀಕರಿಸಿದ್ದಾರೆ.

ವಿಬಿವಿಪಿ ಕರ್ನಾಟಕ ದಕ್ಷಿಣದ ರಾಜ್ಯ ಅಧ್ಯಕ್ಷರಾಗಿ ಬೆಂಗಳೂರಿನ ಹೆಚ್.ಕೆ. ಸತೀಶ್, ಕಾರ್ಯದರ್ಶಿಯಾಗಿ ಪ್ರೇಮಶ್ರೀ ನೇಮಕವಾಗಿದ್ದಾರೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ