ಸ್ವಾಮಿ ವಿವೇಕಾನಂದರು ಯುವಕರಿಗೆ ಆದರ್ಶ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ರಾಷ್ಟ್ರೀಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಜಾವಳಿ ವಲಯದ ಪರೀಕ್ಷಿತ್ ಜಾವಳಿ ಹೇಳಿದರು.
ಮೂಡಿಗೆರೆ ತಾಲೂಕಿನ ಜಾವಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆದ 160 ನೇ ವರ್ಷದ ಸ್ವಾಮಿ ವಿವೇಕಾನಂದರ ಜಯಂತಿ ಉದ್ದೇಶಿಸಿ ಮಾತನಾಡಿದರು.
ಸ್ವಾಮಿ ವಿವೇಕಾನಂದರು ಯುವಜನರಿಗೆ ಸ್ಪೂರ್ತಿದಾಯಕ ಸಂದೇಶಗಳನ್ನು ನೀಡಿದ್ದಾರೆ. ಜಗತ್ತು ಭಾರತದ ಕಡೆ ತಿರುಗಿ ನೋಡುವಂತೆ ತಮ್ಮ ಉನ್ನತ ವಿಚಾರಗಳನ್ನು ಮಂಡಿಸಿದ್ದಾರೆ. ಅವರು ಚಿಕಾಗೋದ ಸರ್ವಧರ್ಮ ಸಮ್ಮೇಳನದಲ್ಲಿ ಮಾಡಿದ ಭಾಷಣ ಇಡೀ ವಿಶ್ವಕ್ಕೆ ಭಾರತದ ಶ್ರೇಷ್ಠತೆಯನ್ನು ಸಾರಿತು. ಅವರು ಅತಿಕಡಿಮೆ ವಯಸ್ಸಿನಲ್ಲಿ ಅಗಾಧ ವಿಚಾರಗಳನ್ನು ವಿಶ್ವಕ್ಕೆ ನೀಡಿದ್ದಾರೆ. ಅವರೊಬ್ಬ ಮಹಾನ್ ದಾರ್ಶನಿಕರಾಗಿದ್ದಾರೆ. ಅವರ ವಿಚಾರಗಳು ನಮಗೆಲ್ಲಾ ಮಾರ್ಗದರ್ಶಕವಾಗಿವೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಜಾವಳಿ ವಲಯದ ಚಂದ್ರಶೇಖರ್,ಪರೀಕ್ಷಿತ್ ಜಾವಳಿ, ಶಾಲೆಯ ಶಿಕ್ಷಕರಾದ ಸ್ವಾಮಿ, ದಿನೇಶ್, ವಿದ್ಯಾರ್ಥಿಗಳು ಇದ್ದರು.




