bjp 2

 

 

ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿರುವ ವಿಜಯಸಂಕಲ್ಪ ಅಭಿಯಾನದ ಅಂಗವಾಗಿ ನಿನ್ನೆ ಜಿಲ್ಲೆಯ ವಿವಿದೆಡೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಮತದಾರರ ಮನೆ ಮನೆಗೆ ತೆರಳಿ ಪಕ್ಷದ ಮತ್ತು ಸರ್ಕಾರದ ಸಾಧನೆಗಳ ಬಗ್ಗೆ ಪ್ರಚಾರ ನಡೆಸಿದರು.
ಚಿಕ್ಕಮಗಳೂರು
ಚಿಕ್ಕಮಗಳೂರು ಕ್ಷೇತ್ರದ ಕರ್ತಿಕೆರೆ ಗ್ರಾಮದಲ್ಲಿ ಶಾಸಕ ಸಿ.ಟಿ. ರವಿ, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ ಮನೆಮನೆಗೆ ತೆರಳಿ ಕರಪತ್ರ ಮತ್ತು ಗೋಡೆ ಬರಹದ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಶೃಂಗೇರಿ
ಶೃಂಗೇರಿ ಕ್ಷೇತ್ರದಲ್ಲಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಎನ್.ಆರ್.ಪುರದಲ್ಲಿ ವಿಜಯಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿದರು.
ತರೀಕೆರೆ
ತರೀಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಶಾಸಕ ಡಿ.ಎಸ್. ಸುರೇಶ್ ಅವರು ಬೇಲೇನಹಳ್ಳಿಯಲ್ಲಿ ನೀಡಿದರು.
ಮೂಡಿಗೆರೆ
ಮೂಡಿಗೆರೆ ಕ್ಷೇತ್ರದಲ್ಲಿ ವಿಧಾನಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಅವರು ಬಿಳಗುಳದಲ್ಲಿ ವಿಜಯಸಂಕಲ್ಪ ಅಭಿಯಾನವನ್ನು ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರದ ಜನಪರ ಯೋಜನೆಯಿಂದ ಜನರು ಸಂಕಷ್ಟದಿಂದ ಮುಕ್ತಿ ಹೊಂದುವ ಮೂಲಕ ನಮ್ಮ ದೇಶ ಅಭಿವೃದ್ಧಿಯಲ್ಲಿ ಪ್ರಥಮ ಸ್ಥಾನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರ ಕನಸು ನನಸು ಮಾಡಲು ಪ್ರತಿಯೊಬ್ಬರೂ ಸಂಕಲ್ಪ ಮಾಡುವುದೇ ವಿಜಯ ಸಂಕಲ್ಪ ಅಭಿಯಾನದ ಉದ್ದೇಶವಾಗಿದೆ ಎಂದರು.

ಗುಜರಾತ್‍ನಲ್ಲಿ ನಡೆದ ಚುನಾವಣೆಗೂ ಮುನ್ನ ವಿಜಯ ಸಂಕಲ್ಪ ಅಭಿಯಾನ ನಡೆಸಿದ ಹಿನ್ನಲೆಯಲ್ಲಿ 150 ಸ್ಥಾನ ಗೆಲುವು ಸಾಧಿಸಲು ಕಾರಣವಾಗಿದೆ ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಸಂಕಲ್ಪ ಮಾಡುವ ಮೂಲಕ ಮುಂಬರುವ ಚುನಾವಣೆಯಲ್ಲಿ ಎಲ್ಲಾ ಸ್ಥಾನ ಗೆಲ್ಲಲು ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪ್ರಿಯಾಂಕಗಾಂಧಿ ಅವರು ಸುಳ್ಳು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅದಕ್ಕೆ ಕಿವಿಕೊಡಬಾರದು. ಸಿದ್ದರಾಮಯ್ಯ ಅವರು ಕೇಂದ್ರದಿಂದ ಬಂದ ಅಕ್ಕಿಗೆ ಲೇಬಲ್ ಹಾಕಿ ಅನ್ನಭಾಗ್ಯ ನೀಡಿದ್ದೇವೆಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸಿದ್ದಾರೆ. ಇಂತಹ ಅನೇಕ ವಿಚಾರಗಳನ್ನು ಜನರಲ್ಲಿ ಜಾಗೃತಿ ಮೂಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರದ ಜನಪರ ಕಾರ್ಯವನ್ನು ಮನೆ ಮನೆಗೆ ಮುಟ್ಟಿಸುವ ಮೂಲಕ ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕೆಂದು ಮನವಿ ಮಾಡಿದರು.

ಪ.ಪಂ. ಉಪಾಧ್ಯಕ್ಷೆ ಕಮಲಾಕ್ಷಿ, ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಎಸ್.ರಘು, ವಿಜಯ ಸಂಕಲ್ಪ ಅಭಿಯಾನದ ತಾಲೂಕು ಸಂಚಾಲಕ ಧನಿಕ್ ಕೋಡದಿಣ್ಣೆ, ತಾ.ಪಂ. ಮಾಜಿ ಅಧ್ಯಕ್ಷ ಕೆ.ಸಿ.ರತನ್, ಮುಖಂಡರಾದ ಬಿ.ಎನ್.ಜಯಂತ್, ಪ್ರಮೋದ್ ದುಂಡುಗ, ಸರೋಜಾ ಸುರೇಂದ್ರ, ಪಂಚಾಕ್ಷರಿ, ನಯನ ತಳವಾರ, ಪ್ರಶಾಂತ್, ಬಾಲು ಮತ್ತಿತರರಿದ್ದರು.

ಮೂಡಿಗೆರೆ ಪಟ್ಟಣದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಬಿ. ಧರ್ಮಪಾಲ್ ಅವರ ನೇತೃತ್ವದಲ್ಲಿ ಪಟ್ಟಣದ ಮನೆಮನೆಗಳಿಗೆ ತೆರಳಿ ವಿಜಯಸಂಕಲ್ಪ ಅಭಿಯಾನದ ಕರಪತ್ರಗಳನ್ನು ಹಂಚಲಾಯಿತು.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ