billuru 3

 

 

ನಮ್ಮ ಪೂರ್ವಜರು ತಲೆತಲಾಂತರದಿಂದ ರೂಢಿಸಿಕೊಂಡು ಬಂದಿದ್ದ, ನಮ್ಮ ನಾಡಿನ ಸಂಸ್ಕøತಿಯೊಂದಿಗೆ ಬೆಳೆದುಬಂದಿದ್ದ ಅನೇಕ ಬಗೆಯ ಗ್ರಾಮೀಣ ಕ್ರೀಡೆಗಳು ಇಂದು ಮರೆಯಾಗುತ್ತಿವೆ. ಅವುಗಳನ್ನು ಉಳಿಸುವ ಮೂಲಕ ಮುಂದಿನ ಪೀಳಿಗೆಗೆ ಎಲ್ಲಾ ಗ್ರಾಮೀಣ ಕ್ರೀಡೆಗಳ ಮಹತ್ವ ತಿಳಿಸುವ ಕೆಲಸ ಆಗಬೇಕಿದೆ ಎಂದು ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ಅವರು ಶನಿವಾರ ಮೂಡಿಗೆರೆ ತಾಲೂಕಿನ ಬಿಳ್ಳೂರು ಗ್ರಾಮದಲ್ಲಿ ಬಿಪಿಪಿಎಲ್ ಕಪ್ ಬಿಳ್ಳೂರು ಪಟ್ಟದೂರು ವತಿಯಿಂದ ಏರ್ಪಡಿಸಿದ್ದ ಹೊನಲು ಬೆಳಕಿನ ಖೋಖೋ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು. ಪ್ರತಿನಿತ್ಯ ಕನಿಷ್ಟ 1 ಗಂಟೆಯಾದರೂ ಕ್ರೀಡೆಯಲ್ಲಿ ಪಾಲ್ಗೊಳ್ಳುವ ಅಭ್ಯಾಸ ರೂಡಿಸಿಕೊಳ್ಳಬೇಕು. ಅದರಿಂದ ಉತ್ತಮ ಆರೋಗ್ಯ ವೃದ್ಧಿಸುತ್ತದೆ. ಕ್ರೀಡೆಗಳ ಆಯೋಜನೆಯಿಂದ ಸಾಮರಸ್ಯ ಉಂಟಾಗುತ್ತದೆ. ಅಲ್ಲದೇ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸುವಂತಹ ಪ್ರೋತ್ಸಾಹ ಕ್ರೀಡಾಪಟುಗಳಿಗೆ ಸಿಗುತ್ತದೆ ಎಂದು ಹೇಳಿದರು.

ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಕರ್ನಾಟಕ ರಾಜ್ಯ ಬಿ.ಜೆ.ಪಿ. ಟ್ರಾನ್ಸ್ ಪೋರ್ಟ್ ಸೆಲ್‍ನ ಅಧ್ಯಕ್ಷೆ ಸುಷ್ಮಾ ಜಿ.ಎಂ.ವಿಭಾ, ಪ.ಪಂ. ಸದಸ್ಯ ಅನೂಪ್ ಕುಮಾರ್, ಗ್ರಾ.ಪಂ. ಸದಸ್ಯ ಸಂಪತ್, ಪಿ.ಎಂ. ರಘು, ಗ್ರಾಮದ ಹಿರಿಯರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ಬಿಳ್ಳೂರು ಶಾಲಾ ಕ್ರೀಡಾಂಗಣದಲ್ಲಿ ನಡೆದ ಹೊನಲು ಬೆಳಕಿನ ಖೋಖೋ ಪಂದ್ಯಾವಳಿಯಲ್ಲಿ ತಾಲ್ಲೂಕಿನ 10 ತಂಡಗಳು ಭಾಗವಹಿಸಿದ್ದವು. ಬಿಳ್ಳೂರು ಕೌಶಿಕ್ ನೇತೃತ್ವದ ತಂಡ ಪ್ರಶಸ್ತಿ ಗಳಿಸಿತು.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ