November 2, 2026
;
malemane

 

 

2019ರಲ್ಲಿ ಉಂಟಾದ ಅತಿವೃಷ್ಟಿ, ಭೂಕುಸಿತ ಮತ್ತು ನೆರೆಹಾವಳಿಯಿಂದ ಸಂತ್ರಸ್ತರಾಗಿರುವ ಕುಟುಂಬದವರು ತಮಗೆ ಸರ್ಕಾರ ಸೂಕ್ತ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿ ಮೂಡಿಗೆರೆ ತಾಲ್ಲೂಕು ಕಛೇರಿ ಆವರಣದಲ್ಲಿ ದರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಂತ್ರಸ್ತರು ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಮಲೆಮನೆ ಗ್ರಾಮದಲ್ಲಿ ಮಳೆ ಮತ್ತು ಭೂಕುಸಿತದಿಂದ ಹತ್ತಾರು ಕುಟುಂಬಗಳು ತಮ್ಮ ಮನೆ ಮತ್ತು ಜಮೀನು ಕಳೆದುಕೊಂಡಿದ್ದು. ತಮಗೆ ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಬೇಕು ಎಂದು ಸತತ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಆದರೆ ಇದುವರೆಗೂ ಸರ್ಕಾರ ಸೂಕ್ತ ಪುನರ್ವಸತಿ ಕಲ್ಪಿಸಿಲ್ಲ.

ವಾಸದ ಮನೆ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದೆವೆ. ಆರಂಭದಲ್ಲಿ ಕೆಲ ತಿಂಗಳು ಬಾಡಿಗೆ ಸರ್ಕಾರದ ವತಿಯಿಂದ ನೀಡಿದ್ದರು. ಈಗ ಬಾಡಿಗೆ ಹಣ ಸಹ ನೀಡುತ್ತಿಲ್ಲ. ನಾವು ಕಳೆದುಕೊಂಡಿರುವ ಜಮೀನಿಗೆ ಸೂಕ್ತ ಪರಿಹಾರವಾಗಲಿ, ಬದಲಿ ಭೂಮಿಯಾಗಲಿ ನೀಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕಂದಾಯ ಸಚಿವರಿಂದ ಮೊದಲ್ಗೊಂಡು ಎಲ್ಲರೂ ಕೇವಲ ಭರವಸೆ ನೀಡುತ್ತಿದ್ದಾರೆ. ಆದರೆ ಯಾವುದೇ ಭರವಸೆ ಈಡೇರಿಸಲು ಸಾಧ್ಯವಾಗಿಲ್ಲ. ಹಾಗಾಗಿ ನಾವು ಈಗ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಮುಂದಾಗಿದ್ದೇವೆ ಎಂದಿದ್ದಾರೆ.

ಪ್ರತಿಭಟನಾಕಾರರು ಸರ್ಕಾರ ನಮಗೆ ಸೂಕ್ತ ಪುನರ್ವಸತಿ ನೀಡುವವರೆಗೆ ತಾಲ್ಲೂಕು ಕಛೇರಿ ಆವರಣದಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದು ಕುಳಿತ್ತಿದ್ದಾರೆ.
ಈ ನಡುವೆ ಪ್ರತಿಭಟನಾಕಾರರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆಯೂ ನಡೆದಿದೆ.

4 ವರ್ಷಗಳಿಂದ ಸೂಕ್ತ ಪುನರ್ವಸತಿಗಾಗಿ ಅಲೆದಾಡುತ್ತಿರುವ ನಿರಾಶ್ರಿತರಿಗೆ ಸೂಕ್ತ ಪುನರ್ವಸತಿ ವ್ಯವಸ್ಥೆ ಮಾಡುವುದಕ್ಕೆ ಸರ್ಕಾರ ಆದ್ಯತೆಯ ಮೇಲೆ ಮುಂದಾಗಬೇಕಾಗಿದೆ.

 

 

Leave a Reply

Your email address will not be published. Required fields are marked *