car1

 

 

ಮರಕ್ಕೆ ಕಾರು ಗುದ್ದಿದ ಪರಿಣಾಮ ಮೂವರು ಗಂಭೀರ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಸಮೀಪದ ಬೀಕೆರೆ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೊಂಬೈಲ್ ಗ್ರಾಮದ ಸುಮಂತ್, ಲಕ್ಷ್ಮಣ್, ಆಲ್ದೂರು ಹವ್ವಳ್ಳಿಯ ರಾಮಚಂದ್ರ ಗಾಯಗೊಂಡವರು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶುಕ್ರವಾರ ರಾತ್ರಿ ಜೋಳದಾಳ್ ಸಮೀಪದ ಬೊಂಬೈಲ್ ಗ್ರಾಮದಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡು ರಾಮಚಂದ್ರ ಅವರನ್ನು ಹಮ್ಮಳ್ಳಿಗೆ ಬಿಡಲು ಬಿಡಲು ಕಾರಿನಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಬೀಕೆರೆ ಸಮೀಪ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ನೇರವಾಗಿ ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಲಕ್ಷ್ಮಣ್ ಅವರ ಮುಖಕ್ಕೆ ಬಲವಾದ ಪೆಟ್ಟು ಬಿದ್ದಿದ್ದು ಬಲಗಾಲಿನ ತೊಡೆ ಮುರಿದಿದೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮಚಂದ್ರ ಅವರ ಎಡಗೈ ಮೂಳೆ ಮುರಿದಿದೆ. ಮತ್ತೋರ್ವ ಪ್ರಯಾಣಿಕ ಸುಮಂತ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ