halle

 

 

ಅಸ್ಸಾಂ ಮೂಲದ ಕಾರ್ಮಿಕರಿಂದ 10ಕ್ಕೂ ಹೆಚ್ಚು ಗ್ರಾಮಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಗಲಾಟೆ ಬಿಡಿಸಲು ಹೋದ ಗ್ರಾಮಸ್ಥರನ್ನ ಅಸ್ಸಾಂ ಕಾರ್ಮಿಕರು ಅಟ್ಟಾಡಿಸಿ ಹೊಡೆದಿರುವ ಘಟನೆ ನಡೆದಿದೆ

ಚಿಕ್ಕಮಗಳೂರು ತಾಲೂಕಿನ ಜಾಗರ ಹೋಬಳಿ ಮಲಗಾರು ಗ್ರಾಮದ ಖಾಸಗಿ ಎಸ್ಟೇಟ್ ವೊಂದರಲ್ಲಿ ಅಸ್ಸಾಂ ಕಾರ್ಮಿಕರು ನಡೆಸಿರುವ ಗಲಾಟೆಗೆ ಮಲಗಾರು ಗ್ರಾಮದ ಹತ್ತಕ್ಕೂ ಅಧಿಕ ಜನರು ಆಸ್ಪತ್ರೆ ಸೇರಿದ್ದಾರೆ.

ಕೆಲಸದ ವಿಚಾರಕ್ಕೆ ಎಸ್ಟೇಟ್ ರೈಟರ್ ಜೊತೆಗೆ ನಡೆಯುತ್ತಿದ್ದ ಗಲಾಟೆಯನ್ನ ಬಿಡಿಸಲು ಬಂದ ಮಲಗಾರು ಗ್ರಾಮದ ಹತ್ತಕ್ಕೂ ಹೆಚ್ಚು ಗ್ರಾಮಸ್ಥರನ್ನ ಅಸ್ಸಾಂ ಮೂಲದ ನೂರಾರು ಕಾರ್ಮಿಕರು ಅಟ್ಟಾಡಿಸಿ ಹಲ್ಲೆ ಮಾಡಿದ್ದಾರೆ. ನೂರಾರು ಕಾರ್ಮಿಕರು ಕಲ್ಲು ದೊಣ್ಣೆಯಿಂದ ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿರುವ ಗ್ರಾಮಸ್ಥರು ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಲ್ಲಂದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನಾಲ್ವರು ಅಸ್ಸಾಂ ಕಾರ್ಮಿಕರನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ