crime

 

 

ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿಯನ್ನು ಸಿಮೆಂಟ್ ಇಟ್ಟಿಗೆಯಿಂದ ಜಜ್ಜಿ ಕೊಲೆ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಮರವಂಜಿ ಎಂಬಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕಡೂರು ತಾಲ್ಲೂಕಿನ ಮಲ್ಲೇದೇವರಹಳ್ಳಿಯ ಮೋಹನ್ (60 ವರ್ಷ) ಎಂದು ಗುರುತಿಸಲಾಗಿದೆ.

ಕಡೂರು ತಾಲೂಕಿನ ನಾಗಗೊಂಡನಹಳ್ಳಿ ಕೆಂಚಪ್ಪ ಆರೋಪಿಯಾಗಿದ್ದು, ಇದೇ 14ರ ಮಂಗಳವಾರ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಮರವಂಜಿ ವೃತ್ತದಲ್ಲಿ ಮೋಹನ ಕುಮಾರ್ ಕೆಂಚಪ್ಪನ ಮೊಬೈಲ್ ಮತ್ತು ಹಣ ಕಸಿದುಕೊಳ್ಳಲು ಯತ್ನಿಸಿದಾಗ ಕೆಂಚಪ್ಪ ಆತನ ತಲೆಯ ಮೇಲೆ ಸಿಮೆಂಟ್ ಇಟ್ಟಿಗೆಯಲ್ಲಿ ಜಜ್ಜಿ ಪರಾರಿಯಾಗಿದ್ದಾನೆ.

ಬೆಳಿಗ್ಗೆ ಚಿಂತಾಜನಕ ಸ್ಥಿತಿಯಲ್ಲಿ ನರಳುತ್ತಿದ್ದ ವ್ಯಕ್ತಿಯನ್ನ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆತನನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ಯುವ ವೇಳೆ ಆತ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಮೃತನ ಸಂಬಂಧಿ ರತ್ನಮ್ಮ ಎಂಬುವರು ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ತನಿಖೆ ಕೈಗೆತ್ತಿಕೊಂಡ ಕಡೂರು ಪೊಲೀಸರು ಸ್ಥಳದಲ್ಲಿರುವ ಸಿಸಿ ಟಿವಿ ಫೂಟೇಜ್ಗಳನ್ನ ಪರಿಶೀಲಿಸಿ ಆರೋಪಿ ಕೆಂಚಪ್ಪನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಲೆ ನಡೆದ ಕೆಲವೇ ಗಂಟೆಯಲ್ಲಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ