Lancha manjunath RI

 

 

ಪೌತಿ ಖಾತೆ ಮಾಡಿಕೊಡಲು ಲಂಚದ ಬೇಡಿಕೆ ಮುಂದಿಟ್ಟು ಹಣ ಪಡೆಯುತ್ತಿದ್ದ ವೇಳೆ ಕಂದಾಯ ನಿರೀಕ್ಷಕ ಒಬ್ಬ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಶಾಂತಿನಗರದ ಮಹಿಳೆಯೊಬ್ಬರು ತನ್ನ ತಂದೆಯ ಹೆಸರಿಗೆ ಚಿಕ್ಕಮಗಳೂರು ತಾಲ್ಲೂಕು ವ್ಯಾಪ್ತಿಯ ಅವತಿ ಹೋಬಳಿ ಅರೆನೂರಿನಲ್ಲಿದ್ದ ಸುಮಾರು ಎರಡು ಎಕರೆ ಜಮೀನನ್ನು ತನ್ನ ಹೆಸರಿಗೆ ಖಾತೆ ಮಾಡಿ ಕೊಡುವಂತೆ ನಾಡಕಚೇರಿಗೆ ಅರ್ಜಿ ಸಲ್ಲಿಸಿದ್ದರು.

ಅವತಿ ಹೋಬಳಿ ಕಂದಾಯ ನಿರೀಕ್ಷಕ ಮಂಜುನಾಥ್ ಆರಂಭದಲ್ಲಿ 10,000 ರೂಗಳನ್ನು ಲಂಚದ ರೂಪದಲ್ಲಿ ಪಡೆದಿದ್ದು ನಂತರ 50,000 ರೂಗಳಿಗೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.

ಈ ಬಗ್ಗೆ ಧ್ವನಿಮುದ್ರಿಕೆ ಸಹಿತ ಲೋಕಾಯುಕ್ತಕ್ಕೆ ಮಹಿಳೆ ದೂರು ಕೊಟ್ಟಿದ್ದು, ಮಂಜುನಾಥ್ ಇಂದು 25 ಸಾವಿರ ರೂಗಳನ್ನು ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಡಿ ವೈ ಎಸ್ ಪಿ ತಿರುಮಲೇಶ್ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಅನಿಲ್ ರಾಥೋಡ್, ಸಚಿನ್ ಕುಮಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ಆರೋಪಿಯನ್ನು ಬಂಧಿಸಿದ್ದು ಮುಂದಿನ ಪ್ರಕ್ರಿಯೆಗಳು ನಡೆಯುತ್ತಿದೆ.

ಮರದಿಂದ ಬಿದ್ದು ಕಾರ್ಮಿಕ ದುರ್ಮರಣ : ಕಾಫಿ ಎಸ್ಟೇಟ್ ನಲ್ಲಿ ದುರ್ಘಟನೆ


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ