acci1

 

 

ಸ್ಕೂಟಿ ಮತ್ತು ಬೈಕಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸವಾರರು ತೀವ್ರ ಗಾಯಗೊಂಡಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಮತ್ತು ಕೊಟ್ಟಿಗೆಹಾರ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ.

ಬೈಕ್ ಮತ್ತು ಸ್ಕೂಟಿಯ ನಡುವಿನ ಡಿಕ್ಕಿಯ ರಭಸಕ್ಕೆ ಸ್ಕೂಟಿ ಎರಡು ತುಂಡಾಗಿದೆ. ಸ್ಕೂಟಿಯಲ್ಲಿದ್ದ ಇಬ್ಬರು ಮತ್ತು ಬೈಕಿನಲ್ಲಿದ್ದ ಓರ್ವ ಸವಾರರ ಕೈ ಕಾಲುಗಳಿಗೆ ತೀವ್ರ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.

ಗಾಯಗೊಂಡವರಲ್ಲಿ ಸ್ಕೂಟಿಯಲ್ಲಿದ್ದ ಬಾಳೂರು ಸುಂದರಬೈಲಿನ ತಮ್ಮಣ್ಣಗೌಡ ರೈಟರು ಮತ್ತು ಅವರ ಪುತ್ರ ಸಂಕೇತ್ ಹಾಗೂ ಬೈಕಿನಲ್ಲಿದ್ದ ಬೆಂಗಳೂರು ಮೂಲದ ಲೋಹಿತ್ ಎಂದು ತಿಳಿದುಬಂದಿದೆ.

ತಮ್ಮಣ್ಣಗೌಡ ಮತ್ತು ಸಂಕೇತ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಒಯ್ಯಲಾಗಿದೆ. ಲೋಹಿತ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ