mullu handi

ಸಾಂದರ್ಭಿಕ ಚಿತ್ರ

 

 

ಮುಳ್ಳುಹಂದಿ ಶಿಕಾರಿಗೆಂದು ಮುಳ್ಳುಹಂದಿ ಸುರಂಗಕ್ಕೆ ನುಗ್ಗಿದ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಮಾಳೀಗನಾಡು ಎಂಬಲ್ಲಿ ಈ ಘಟನೆ ನಡೆದಿದೆ.
ಮಾಲೀಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಘಟನೆ ನಡೆದಿದೆ.

ಮೃತರನ್ನು ತಮಿಳುನಾಡು ಮೂಲದ ಕಾರ್ಮಿಕರು ಎಂದು ತಿಳಿದುಬಂದಿದೆ.

ಎಸ್ಟೇಟ್ ನಲ್ಲಿ ಕಾಳುಮೆಣಸು ಕೊಯ್ಯಲು ಬಂದಿದ್ದ ತಮಿಳುನಾಡು ಮೂಲದ ನಾಲ್ವರು ಕಾರ್ಮಿಕರು ಬೆಟ್ಟದ ಸಮೀಪದಲ್ಲಿ ಮುಳ್ಳುಹಂದಿ ಶಿಕಾರಿಗೆ ತೆರಳಿದ್ದರು ಎನ್ನಲಾಗಿದೆ. ಮುಳ್ಳುಹಂದಿ ಗುಹೆಗೆ ಹೊಗೆಹಾಕಿ ನಂತರ ಒಬ್ಬೊಬ್ಬರಾಗಿ ಸುರಂಗದ ಒಳಗೆ ಹೋಗಿದ್ದಾರೆ. ಒಬ್ಬರು ಬರಲಿಲ್ಲ ಎಂದು ಮತ್ತೊಬ್ಬರು ಹೋಗಿದ್ದಾರೆ. ಕೊನೆಗೆ ಇಬ್ಬರು ವಾಪಾಸ್ಸು ಬಂದಿದ್ದು, ಇನ್ನಿಬ್ಬರು ಸುರಂಗದೊಳಗೇ ಸಿಲುಕಿದ್ದಾರೆ. ಅಲ್ಲಿಯೇ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸ್, ಅರಣ್ಯ ಮತ್ತು ಅಗ್ನಿಶಾಮಕ ತಂಡ ಭೇಟಿ ನೀಡಿ ಗುಹೆಯಿಂದ ಶವಗಳನ್ನು ಹೊರತೆಗೆದಿದ್ದಾರೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಷ್ಟೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ