IMG_20230228_061435

 

 

ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದ ಶ್ರೀ ರಾಮೇಶ್ವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ ಅಂತರ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಶಿವಮೊಗ್ಗ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪಂದ್ಯಾವಳಿಯಲ್ಲಿ ವಿವಿಧ ಜಿಲ್ಲೆಯ ತಂಡಗಳು ಭಾಗವಹಿಸಿದ್ದವು. ಚಿಕ್ಕಮಗಳೂರು ತಾಲ್ಲೂಕಿನ ಮೈಲಿಮನೆ ತಂಡ ದ್ವಿತೀಯ ಸ್ಥಾನ ಗಳಿಸಿದರೆ, ಕುಂದೂರು ಮತ್ತು ಹಾಸನಾಂಬ ತಂಡಗಳು ಜಂಟಿಯಾಗಿ ತೃತೀಯ ಸ್ಥಾನ ಗಳಿಸಿದವು.

ಶಿವಮೊಗ್ಗ ತಂಡದ ಶಶಿ ಟೂರ್ನಿಯ ಅತ್ತ್ಯುತ್ತಮ ಆಟಗಾರ ಗೌರವಕ್ಕೆ ಪಾತ್ರರಾದರು, ಕುಂದೂರು ತಂಡದ ಕೆ.ಜೆ.ಪ್ರಸನ್ನ, ಭದ್ರಾವತಿ ತಂಡದ ವಿನಯ್, ಶೃಂಗೇರಿ ತಂಡದ ಮನೋಜ್ ಉತ್ತಮ ಆಟಗಾರ ಪ್ರಶಸ್ತಿ ಗಳಿಸಿದರು.

ಪಂದ್ಯಾವಳಿಯಲ್ಲಿ ಕುಂದೂರು ಮತ್ತು  ಸುತ್ತಮುತ್ತಲ ಗ್ರಾಮಸ್ಥರು ಉಪಸ್ಥಿತರಿದ್ದು ಆಟಗಾರರನ್ನು ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆ.ಲಕ್ಷ್ಮಣಗೌಡ, ಶ್ರೀ ರಾಮೇಶ್ವರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಕೆ.ಬಿ.ಮಂಜುನಾಥ್ ಮತ್ತು ಸದಸ್ಯರು, ಗ್ರಾ.ಪಂ ಅಧ್ಯಕ್ಷರಾದ‌ ವಿಜಯೇಂದ್ರ, ಪಂದ್ಯಾವಳಿಯ ಆಯೋಜಕರಾದ ಕೆ.ಜೆ. ಪ್ರಸನ್ನ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ