ಅಥ್ಲೆಟಿಕ್ ತರಬೇತುದಾರನೊಬ್ಬ ಅಪ್ರಾಪ್ತ ಕ್ರೀಡಾಪಟುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಸಂಬಂಧ ಸಂತ್ರಸ್ತೆ ಕ್ರೀಡಾಪಟು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಅವರಿಗೆ ದೂರು ಸಲ್ಲಿಸಿದ್ದಾರೆ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ಭರತ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಲಾಗಿದೆ.
ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ ಬಿಹಾರದ ಪಾಟ್ನಾದಲ್ಲಿ ಆಯೋಜನೆ ಮಾಡಿದ್ದ ಕ್ರೀಡಾಕೂಟದಲ್ಲಿ ಭಾಗಿಯಾದ ವೇಳೆ ಈ ಘಟನೆ ನಡೆದಿದೆ.
ಫೆ.15ರಂದು ಕ್ರೀಡಾಕೂಟ ಮುಗಿಸಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಸ್ಸಿನಲ್ಲಿ ಬರುವಾಗ ಅಪ್ರಾಪ್ತ ಕ್ರೀಡಾಪಟುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಆರೋಪಿ ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿ ಎಸ್.ಭರತ್ ಜಿಲ್ಲಾ ಯುವ ಸಬಲೀಕರಣ, ಕ್ರೀಡಾ ಇಲಾಖೆಯಲ್ಲಿ ಅಥ್ಲೆಟಿಕ್ಸ್ ತರಬೇತುದಾರರಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.
ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
*********************************
ನಿರಂತರ ಸುದ್ದಿಗಳಿಗಾಗಿ ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ ⇓
https://chat.whatsapp.com/DDXjmfQaBa0HJQqmKf7y89



