Screenshot_20230316_151254

 

 

ಚಿಕ್ಕಮಗಳೂರು ಜಿಲ್ಲಾ ಕಾಂಗ್ರೇಸ್ ಸಮಿತಿ ಕಾರ್ಯದರ್ಶಿ, ಮೂಡಿಗೆರೆ ಕ್ಷೇತ್ರದ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿ ಎನ್.ಆರ್. ನಾಗರತ್ನ ಕಾಂಗ್ರೇಸ್ ಪಕ್ಷವನ್ನು ತೊರೆದಿದ್ದಾರೆ.

ಅವರು ನಿನ್ನೆ ಬೆಂಗಳೂರಿನಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿಗೆ ತಮ್ಮ ರಾಜೀನಾಮೆ ಪತ್ರ ನೀಡಿರುತ್ತಾರೆ.

ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಮಾಜಿ ಸಚಿವೆ ಶ್ರೀಮತಿ ಮೋಟಮ್ಮನವರು ತಮ್ಮ ವಿರುದ್ಧ ತೋರುತ್ತಿರುವ ಧೋರಣೆಯಿಂದ ಬೇಸತ್ತು ಪಕ್ಷ ತೊರೆಯುತ್ತಿರುವುದಾಗಿ ಆರೋಪಿಸಿದ್ದಾರೆ.

ನಾಗರತ್ಮ ಅವರು ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ್ದರು. 15 ವರ್ಷಗಳಿಂದ ಕಾಂಗ್ರೇಸ್ ನಲ್ಲಿ ಸಕ್ರಿಯರಾಗಿದ್ದರು. ಕ್ಷೇತ್ರದಲ್ಲಿ ಕಳೆದ ಅನೇಕ ವರ್ಷಗಳಿಂದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಇದೀಗ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅವರು ಕಾಂಗ್ರೇಸ್ ಪಕ್ಷವನ್ನು ತೊರೆದಿದ್ದಾರೆ. ಬೇರೆ ಪಕ್ಷ ಸೇರುವ ಸಾಧ್ಯತೆಯ ಬಗ್ಗೆ ಪತ್ರಿಕೆಯ ಪ್ರಶ್ನೆಗೆ ಪ್ರತಿಕ್ರಿಯ  ನೀಡಿರುವ ಅವರು, ಸದ್ಯಕ್ಕೆ ರಾಜಕೀಯ ಚಟುವಟಿಕೆಯಿಂದ ದೂರವಿದ್ದು ತಮ್ಮದೇ ಸಂಸ್ಥೆಯ ಮೂಲಕ ಸಮಾಜಸೇವೆ ಮುಂದುವರಿಸುವುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ