bairaveswara

 

 

ಸಕಲೇಶಪುರ ತಾಲೂಕಿನ ಐತಿಹಾಸಿಕ, ಧಾರ್ಮಿಕ ಮತ್ತು ಚಾರಣಿಗರ ನೆಚ್ಚಿನ ತಾಣವಾಗಿರುವ ಶ್ರೀ ಬೆಟ್ಟದ ಬೈರವೇಶ್ವರ ದೇವಸ್ಥಾನ ರಸ್ತೆಗೆ ಸಕಲೇಶಪುರದ ಶಾಸಕ   ಹೆಚ್. ಕೆ. ಕುಮಾರಸ್ವಾಮಿ ಗುದ್ದಲಿ ಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದರು.

ಒಟ್ಟು 3 ಕೋಟಿ ರೂ ವೆಚ್ಚದ 2 ಕಿಲೋ ಮೀಟರ್ ಕಾಂಕ್ರೀಟ್ ರಸ್ತೆ ಇದಾಗಿರುತ್ತದೆ. ಈ ರಸ್ತೆ ಅಭಿವೃದ್ಧಿ ಮಾಡಲು ಬಹುವರ್ಷಗಳಿಂದ ಸಾರ್ವಜನಿಕರು ಒತ್ತಾಯಿಸುತ್ತಿದ್ದರು.

ಈ ಸಂದರ್ಭದಲ್ಲಿ ಮರಗುಂದ ಕ್ಷೇತ್ರದ ಗ್ರಾಮ ಪಂಚಾಯತಿ ಸದಸ್ಯ ರವೀಂದ್ರ ಕುಮಾರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಸುಪ್ರದೀಪ್. ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮೋಹನ್, ಜೂನಿಯರ್ ಇಂಜಿನಿಯರ್ ಅಬ್ದುಲ್ ರಜಾಕ್, ಹಾನುಬಾಳು ಹೋಬಳಿ ಜೆ. ಡಿ. ಎಸ್. ಅಧ್ಯಕ್ಷ ಮೋಹನ್ ಮತ್ತು ಗ್ರಾಮಸ್ಥರು ಹಾಜರಿದ್ದರು.

ರಸ್ತೆ ಕಾಮಗಾರಿ ಸಹ ನಿನ್ನೆಯಿಂದಲೇ ಪ್ರಾರಂಭವಾಗಿದೆ. ಕಾಮಗಾರಿ ಮಂಜೂರು ಮಾಡಿಸಿ,  ಕೆಲಸ ಪ್ರಾರಂಭ ಮಾಡಿಸಿದ ಶಾಸಕರನ್ನು ಗ್ರಾಮ ಪಂಚಾಯತಿ ಸದಸ್ಯ ರವೀಂದ್ರಕುಮಾರ್ ಅವರು ಗ್ರಾಮಸ್ಥರು ಮತ್ತು ಭಕ್ತಾದಿಗಳ ಪರವಾಗಿ ಅಭಿನಂದಿಸಿ ಸನ್ಮಾನಿಸಿದರು


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ