car

 

 

ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದು, ಉಳಿದ ಐದು ಮಂದಿ ತೀವ್ರ ಗಾಯಗೊಂಡಿದ್ದ, ಅದರಲ್ಲಿ ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ.

ಸುಮಾರು ನೂರು ಅಡಿ ಕಂದಕಕ್ಕೆ ಕಾರು ಬಿದ್ದಿದ್ದು, ಸ್ಥಳೀಯರ ಸಹಾಯದಿಂದ ಗಾಯಳುಗಳನ್ನು ವಿವಿಧ ಆಸ್ಪತ್ರೆಗೆ ಸೇರಿಸಲಾಗಿತ್ತು. ಅದರಲ್ಲಿ ತೀವ್ರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ ಎಂಬುವವರು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಉಜಿರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರ ಭಾಗವಹಿಸಿ ರಾತ್ರಿ ಉಜಿರೆಗೆ ಮರಳುತ್ತಿದ್ದರು. ಆ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕ್ಕೆ ಬಿದ್ದು ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕಾರಿನಲ್ಲಿ ಪುಷ್ಪಾವತಿ ಆರ್.ಶೆಟ್ಟಿ, ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ್, ಸಾಕ್ಷಿ, ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ ಹಾಗೂ ಕಾರು ಚಾಲಕ ಅರುಣ್ ಪ್ರಯಾಣಿಸುತ್ತಿದ್ದರು.

ಗಾಯಾಳುಗಳನ್ನು ತಕ್ಷಣವೇ ಕಕ್ಕಿಂಜೆ ಹಾಗೂ ಉಜಿರೆ ಆಸ್ಪತ್ರೆಗೆ ದಾಖಲಿಸಿ ಗಂಭೀರ ಗಾಯಗೊಂಡಿದ್ದ ಸರೋಜಿನಿ ಶೆಟ್ಟಿ ಮತ್ತು ಪೂರ್ಣಿಮಾ ಶೆಟ್ಟಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸರೋಜಿನಿ ಶೆಟ್ಟಿ ಮೃತ ಪಟ್ಟಿದ್ದಾರೆ. ಪೂರ್ಣಿಮಾ ಶೆಟ್ಟಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ತನು ಕೊಟ್ಟಿಗೆಹಾರ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ